ಚಿತ್ರದುರ್ಗ: ಪುತ್ರ ರಘುಚಂದನ್‍ಗೆ ಚಿತ್ರದುರ್ಗ (Chitradurga) ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಲು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರೇ ಕಾರಣ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ (M.Chandrappa) ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದ 27 ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆಯಾದರೂ ಸಹ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಮಾತ್ರ ಬಾಕಿಯಾಗಿತ್ತು. ಇದೀಗ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಬಿಜೆಪಿ (BJP) ಮಣೆ ಹಾಕಿದೆ. ಪುತ್ರನಿಗೆ ಟಿಕೆಟ್ ಕೈತಪ್ಪಿದ್ದು, ಇದಕ್ಕೆ ಬಿಎಸ್‍ವೈ ಕಾರಣ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಶಿವಸೇನೆ ಸೇರಿದ ನಟ ಗೋವಿಂದ್
Advertisement
ಗೋವಿಂದ ಕಾರಜೋಳ ಜೊತೆ ಅದೇನು ಹೊಂದಾಣಿಕೆ ಇದೆಯೋ ಗೊತ್ತಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡದಿದ್ರೆ ನಾನು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ದಂಬಾಲು ಬಿದ್ದು, ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ನಾನು ಯಡಿಯೂರಪ್ಪ ಕುಟುಂಬಕ್ಕೆ ತೋರಿದ ನಿಷ್ಠೆ ಸಾರ್ಥಕವೆನಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
Advertisement
Advertisement
ರಘುಚಂದನ್ ಸಹ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಪದೇ ಪದೇ ವಲಸಿಗ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ರಾಷ್ಡ್ರೀಯ ಪಕ್ಷಗಳು ಮಣೆ ಹಾಕುತ್ತಿವೆ. ವಿವಿಧ ಕ್ಷೇತ್ರಗಳ ಚುನಾವಣೆಗಳಲ್ಲಿ ಸೋತು ಸುಣ್ಣವಾದ ನಿರಾಶ್ರಿತರ ಆಶ್ರಯ ತಾಣ ಚಿತ್ರದುರ್ಗ ಕ್ಷೇತ್ರವಾಗಿದೆ. ಪಕ್ಷದ ಕೆಲ ಹಿರಿಯ ನಾಯಕರು ನನಗೆ ಟಿಕೆಟ್ ತಪ್ಪಿಸಲು ಕಳ್ಳಾಟದ ಕೆಲಸ ಮಾಡಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಶುಕ್ರವಾರ ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
Advertisement
ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ರಘುಚಂದನ್ ಬೆಂಬಲಿಗರು ಗೋ ಬ್ಯಾಕ್ ಕಾರಜೋಳ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ