ಚಿತ್ರದುರ್ಗ: ಡಿವೈಡರ್‌ಗೆ ಡಿಕ್ಕಿಯಾಗಿ ಬಸ್‌ವೊಂದು (Bus) ಪಲ್ಟಿಯಾದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ಪಟ್ಟಣದ ಬಳಿ ನಡೆದಿದೆ.
ಬಸ್ ಮೊಳಕಾಲ್ಮೂರಿನಿಂದ (Molakalmuru) ಚಳ್ಳಕೆರೆಗೆ ಬರುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಅತಿವೇಗದ ಚಾಲನೆ ಹಾಗೂ ಚಾಲಕನ ಅಜಾಗರೂಕತೆಯ ಪರಿಣಾಮ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಚನ್ನಪಟ್ಟಣದ ಅಕಿಲ್ ಷಾ ಖಾದ್ರಿ ದರ್ಗಾ ಗುರುಗಳ ಭೇಟಿಯಾದ ಹೆಚ್‌ಡಿಡಿ – ಮೊಮ್ಮಗನ ಗೆಲ್ಲಿಸುವಂತೆ ಮುಸ್ಲಿಂ ಸಮುದಾಯಕ್ಕೆ ಮನವಿ
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಚೆಕ್ ಡ್ಯಾಂನಲ್ಲಿ ಈಜಾಡಲು ಹೋಗಿದ್ದ ಬಾಲಕ ನೀರಲ್ಲಿ ಮುಳುಗಿ ಸಾವು