ಕಾರು, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 4 ಮಂದಿಗೆ ಗಾಯ

Public TV
1 Min Read
CTD ACCIDENT

ಚಿತ್ರದುರ್ಗ: ಇಂಡಿಕಾ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಲ್ಲಿ ರಾಯಚೂರು ಜಿಲ್ಲೆ ಲಿಂಗಸುಗೂರು ಮೂಲದ ಕಾರು ಚಾಲಕ ಹನುಮಂತಪ್ಪ (29) ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ಕು ಜನರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

CTD ACCIDENT

ಈ ಘಟನೆ ತಡರಾತ್ರಿ ನಡೆದಿದ್ದು, ವೇಗವಾಗಿ ಬಂದ ಇಂಡಿಕಾ ಕಾರು ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇಂಡಿಕಾ ಕಾರು ಬಲಭಾಗ ಸಂಪೂರ್ಣ ಜಖಂ ಹಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಕ್ರೂಸರ್ ರಸ್ತೆ ದಾಟಿ ಪಕ್ಕದಲ್ಲಿದ್ದ ಪೊದೆಯೊಳಗೆ ಹೋಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಆನಂದ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *