ಚಿತ್ರದುರ್ಗ: ಶವಯಾತ್ರೆ ವೇಳೆ ಹಾರ್ನ್ ಮಾಡಿದ ಎಂಬ ಕಾರಣಕ್ಕೆ ಚಾಲಕನಿಗೆ ಮೃತರ ಸಂಬಂಧಿಗಳು ಗೂಸಾ ಕೊಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜಿಲ್ಲೆಯ ಮೇದೇಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಮುಂದೆ ಮುಸ್ಲಿಂ ಸಮುದಾಯದ ವ್ಯಕ್ತಿಯ ಶವಯಾತ್ರೆ ನಡೆಯುತ್ತಿತು. ಈ ವೇಳೆ ಹಾರ್ನ್ ಮಾಡಿದ ಎಂಬ ಕಾರಣಕ್ಕೆ ಖಾಸಗಿ ಬಸ್ ಚಾಲಕ ರಾಕೇಶ್ ಎಂಬುವವರ ಮೇಲೆ ಮೃತ ಸಂಬಂಧಿಕರು ಹಲ್ಲೆ ಮಾಡಿದ್ದಾರೆ.
ಬಸ್ ನಿಲ್ದಾಣದ ಮುಂದೆ ಮುಸ್ಲಿಂ ಸಮುದಾಯದ ಖಬರುಸ್ತಾನ್ ಬಳಿ ಶವಯಾತ್ರೆ ತೆರಳುತಿತ್ತು. ಆಗ ಬಸ್ ನಿಲ್ದಾಣಕ್ಕೆ ತಿರುವು ಪಡೆಯಲು ಚಾಲಕ ರಾಕೇಶ್ ಹಾರ್ನ್ ಮಾಡಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಮೃತರ ಸಂಬಂಧಿಕರು ಆತನ ಮೇಲೆ ಹಲ್ಲೆ ಮಾಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ರಾಕೇಶ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಕ್ಷಣಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸಂತೋಷ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಈ ಸಂಬಂಧ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.