ಚಿತ್ರದುರ್ಗ: ಬುಧವಾರ ಅಪಘಾತವಾಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು 25 ವರ್ಷದ ಅರುಣ್ ಎಂದು ಗುರುತಿಸಿದ್ದು, ಕಾರು ಚಾಲಕ ಪವನ್, ಸದಾನಂದ ಮತ್ತು ಸಿರೀಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೋಂಡಾ ಎಕ್ಸೆಂಟ್ ಕಾರಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿನ ಕಡೆಗೆ ಬರುವಾಗ ಈ ಘಟನೆ ಸಂಭವಿಸಿದೆ.
ನಿನ್ನೆ ಅಪಘಾತವಾಗಿದ್ದ ಲಾರಿಯನ್ನು ಸ್ಥಳಾಂತರಿಸದೇ ನಿರ್ಲಕ್ಷ್ಯ ತೋರಿದ ಪೊಲೀಸರೇ ಈ ಘಟನೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.