ಚಿತ್ರದುರ್ಗ: ಮುರುಘಾಶ್ರೀ (MurughaShree) ವಿರುದ್ಧ ದಾಖಲಾಗಿರುವ ಪೋಕ್ಸೊ ಕೇಸ್ ತನಿಖೆ ನಡೆಸಿರುವ ಚಿತ್ರದುರ್ಗ (Chitradurga) ಪೊಲೀಸರು 694 ಪುಟಗಳ ಚಾರ್ಜ್ ಶೀಟನ್ನು ಕೋರ್ಟ್ (Court) ಗೆ ಸಲ್ಲಿಸಿದ್ದಾರೆ. ಆದರೆ ಈ ಆರೋಪವನ್ನು ಮುರುಘಾಶ್ರೀ ತನಿಖೆ ವೇಳೆ ತಳ್ಳಿಹಾಕಿದ್ದಾರೆ.
Advertisement
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಸಂತ್ರಸ್ತೆಯ ಹೇಳಿಕೆ ಆಧರಿಸಿ ಶ್ರೀಗಳ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗ ಡಿವೈಎಸ್‍ಪಿ ಅನಿಲ್ ಕುಮಾರ್ (DYSP Anil Kumar) ನೇತೃತ್ವದಲ್ಲಿ ಪ್ರಕರಣವನ್ನು ತನಿಖೆ ನಡೆಸಲಾಗಿದೆ. ಆರೋಪಿಗಳು ಹಾಗೂ ಸಂತ್ರಸ್ತೆಯರ ವಿಚಾರಣೆ, ಸ್ಥಳ ಮಹಜರನ್ನು ಪ್ರತ್ಯೇಕವಾಗಿ ನಡೆಸಿದ್ದಾರೆ.
Advertisement
Advertisement
ಅಕ್ಟೋಬರ್ 27ರಂದು ಪ್ರಕರಣದ ತನಿಖೆ ಕುರಿತ ಒಟ್ಟು 694 ಪುಟದ ಚಾರ್ಜ್ ಶೀಟನ್ನು ಕೋರ್ಟಿಗೆ ಸಲ್ಲಿಸಲಾಗಿದೆ. ಈ ಪ್ರಕರಣದ ಎ1 ಆರೋಪಿ ಶಿವಮೂರ್ತಿ ಮುರುಘಾ ಶರಣರ ತನಿಖೆಯನ್ನು ಪೊಲೀಸರು ನಡೆಸಿದ್ದು, ಈ ವೇಳೆ ಸಂತ್ರಸ್ತೆಯರ ಆರೋಪವನ್ನು ಮುರುಘಾಶ್ರೀ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
Advertisement
ಮುರುಘಾ ಶ್ರೀ ಹೇಳಿದ್ದೇನು..?: 4-5 ವರ್ಷಗಳಿಂದ ವಾರ್ಡನ್ ಆಗಿ ರಶ್ಮಿ (Warden Rashmi) ನೇಮಕ ಆಗಿದೆ. ರಶ್ಮಿ ಯಾವಾಗಿನಿಂದ ಮಠದಲ್ಲಿದ್ದರು ಎಂಬುದು ಗೊತ್ತಿಲ್ಲ. ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರೀತಿಯಿಂದ ಅಪ್ಪಾಜಿ ಎನ್ನುತ್ತಾರೆ. ನಮ್ಮ ಖಾಸಗಿ ಕೊಠಡಿಗೆ ಯಾರಿಗೂ ಪ್ರವೇಶ ಇರಲಿಲ್ಲ. ಸ್ವಚ್ಚತೆಯ ಕೆಲಸಕ್ಕೆ ನಾವು ಮಕ್ಕಳನ್ನು ಬಳಸಲ್ಲ. ಸಂತ್ರಸ್ತ ವಿದ್ಯಾರ್ಥಿನಿಯರ ಬಗ್ಗೆ ವೈಯಕ್ತಿಕ ಪರಿಚಯ ಇಲ್ಲ. ಗುಂಪಿನಲ್ಲಿ ಬಂದು ವಿದ್ಯಾರ್ಥಿಗಳು ಭೇಟಿ ಆಗುತ್ತಿದ್ದರು ಎಂದಿದ್ದಾರೆ.
ಹಣ್ಣು, ಡ್ರೈಫ್ರೂಟ್ಸ್, ಚಾಕ್ಲೇಟ್ ಪ್ರಸಾದ ರೂಪದಲ್ಲಿ ನೀಡುತ್ತಿದ್ದೆವು. ಮತ್ತು ಬರುವ ಪದಾರ್ಥ ಬೆರೆಸಿ ಮಕ್ಕಳಿಗೆ ನೀಡಿಲ್ಲ. ಮದ್ಯಪಾನ ಮಾಡುವ ಅಭ್ಯಾಸ ನಮಗೆ ಇಲ್ಲ. ಬಸವರಾಜನ್ ಮಠದ ಹಣ ದುರುಪಯೋಗ ಮಾಡಿದ್ದರು. ಹಾಸ್ಟೆಲ್ ವಿದ್ಯಾರ್ಥಿಗಳನ್ನು ಲೈಂಗಿಕ ವಾಗಿ ಬಳಸಿಕೊಂಡಿಲ್ಲ. ನನ್ನ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳು. ಇದು ಷಡ್ಯಂತ್ರ, ಪ್ರಚೋದಿತವಾಗಿದ್ದು ಸತ್ಯಕ್ಕೆ ದೂರಾಗಿವೆ ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಒಟ್ಟಾರೆ ಮಠದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ನಾವು ಬಳಸಿಕೊಂಡಿಲ್ಲವೆಂದು ಮುರುಘಾಶ್ರೀ ಪೊಲೀಸರ ತನಿಖೆ ವೇಳೆ ಹೇಳಿದ್ದಾರೆ. ಈ ದೇಶದ ಕಾನೂನು ಗೌರವಿಸುವ ದೃಷ್ಠಿಯಿಂದ ನಾನು ಸ್ವ-ಇಚ್ಛೆಯಿಂದ ನಿಮ್ಮೆದುರು ಹಾಜರಾಗಿದ್ದೇನೆಂದು ಪೊಲೀಸರ ಮುಂದೆ ಶ್ರೀಗಳು ಉತ್ತರಿಸಿರುವ ಮಾಹಿತಿ ಚಾರ್ಜ್‍ಶೀಟಲ್ಲಿ ದಾಖಲಾಗಿದೆ.