ಚಿತ್ರದುರ್ಗ| ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್ – ಚಾಲಕ, ನಿರ್ವಾಹಕ ಪಾರು

Public TV
1 Min Read
Chitradurga Tanker Fire

ಚಿತ್ರದುರ್ಗ: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್‌ಗೆ (Tanker) ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ (Chitradurga) ಸರೋಜಬಾಯಿ ಕಲ್ಯಾಣ ಮಂಟಪದ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

Chitradurga Tanker Fire 1

ಟ್ಯಾಂಕರ್ ಚಿತ್ರದುರ್ಗದಿಂದ ಬೆಳಗಾವಿಗೆ ಸ್ಪಿರಿಟ್ ತರುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಘಟನೆ ವೇಳೆ ಟ್ಯಾಂಕರ್‌ನಲ್ಲಿದ್ದ ಚಾಲಕ, ನಿರ್ವಾಹಕ ಬೆಂಕಿಯಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

ಲಾರಿ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮುಡಾ ಸಣ್ಣ ಕೇಸ್, ಚುನಾವಣಾ ಬಾಂಡ್ ದೊಡ್ಡ ಹಗರಣ; ಪ್ರಧಾನಿಯಿಂದ ಎಲ್ಲಾ ಸಚಿವರು ಬರ್ತಾರೆ: ಶರಣಪ್ರಕಾಶ ಪಾಟೀಲ್

Share This Article