– ಬೆಂಗಳೂರಿಗೆ ತೆರಳುವವರು ಮಾರ್ಗ ಬದಲಾಯಿಸಿ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ (KR Halli Gate) ಬಳಿ ಟ್ರಾಫಿಕ್ ಜಾಮ್ (Traffic Jam) ಉಂಟಾದ ಪರಿಣಾಮ ಸುಮಾರು 5 ಕಿಲೋ ಮೀಟರ್‌ವರೆಗೂ ವಾಹನಗಳು ನಿಂತಲ್ಲೇ ನಿಂತಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿವಾಲದಿಂದ ಗೊರ್ಲಡಕು ಗೇಟ್ ಮುಂದೆ ಜವನಗೊಂಡನಹಳ್ಳಿಯಿಂದ ಶಿರಾ ತಲುಪುವವರೆಗೆ ಜಾಮ್ ಉಂಟಾಗಿದೆ. ಟ್ರಾಫಿಕ್ ಹಿನ್ನೆಲೆ ಬೆಂಗಳೂರಿಗೆ ತೆರಳುವವರು ಮಾರ್ಗ ಬದಲಿಸುವುದು ಉತ್ತಮ. ಇದನ್ನೂ ಓದಿ: ಆ.15 ರಿಂದ ಸಿಗುತ್ತೆ ಫಾಸ್ಟ್ಯಾಗ್ ವಾರ್ಷಿಕ ಪಾಸ್
ಕೆಆರ್ ಹಳ್ಳಿ ಬಳಿ ಫ್ಲೈಓವರ್ ನಿರ್ಮಾಣ ಹಿನ್ನೆಲೆ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಚಲಿಸಿತ್ತಿದೆ. ಕಿರಿದಾದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಉಂಟಾಗಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು ಕಂಗಾಲಾಗಿದ್ದಾರೆ. ಭಾನುವಾರ ರಾತ್ರಿ ಕೂಡ ಇದೇ ಸಮಸ್ಯೆ ತಲೆದೋರಿತ್ತು. ಇದನ್ನೂ ಓದಿ: Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ