ಬೆಂಗಳೂರು: ಚಿತ್ರದುರ್ಗದಲ್ಲಿ (Chitradurga) ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣ (Varshitha Murder Case) ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಸದಸ್ಯ ನವೀನ್ ವಿಷಯ ಪ್ರಸ್ತಾಪ ಮಾಡಿದ್ರು.
ಚಿತ್ರದುರ್ಗದ ವಿದ್ಯಾರ್ಥಿನಿ ಕೊಲೆ ಆಗಿದೆ. ದಲಿತ ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾ. ಅವಳನ್ನು ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಹಾಕಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಅತ್ಯಂತ ಬಡತನದ ಕುಟುಂಬದಿಂದ ಬಂದು ಭವಿಷ್ಯದ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿ. ಸರ್ಕಾರಿ ಹಾಸ್ಟೆಲ್ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. ರಾಜ್ಯದಲ್ಲಿ ಈ ರೀತಿ ಘಟನೆಗಳು ನಡೆದ ಸಂದರ್ಭದಲ್ಲಿ ಸರ್ಕಾರ ನ್ಯಾಯ ಕೊಡಿಸಬೇಕು. ಈ ಹತ್ಯೆಗೆ ಕಾರಣವಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹ ಮಾಡಿದರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ವಿಧಾನ ಪರಿಷತ್ತಿನಲ್ಲೂ ಅಂಗೀಕಾರ
ಇಡೀ ದಿನ ಸಂಘಟನೆಗಳು ಹೋರಾಟ ಮಾಡಿವೆ. ರಾಜ್ಯ ಇಡೀ ಭಯದ ವಾತಾವರಣದಲ್ಲಿ ಇರುವಂತೆ ಮಾಡಿದೆ. ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಅಂತ ನವೀನ್ ಒತ್ತಾಯಿಸಿದರು. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಇದಕ್ಕೆ ಗೃಹ ಸಚಿವ ಪರಮೇಶ್ವರ್ (G Parameshwar) ಉತ್ತರ ನೀಡಿ, ಸರ್ಕಾರ ಇಂತಹ ಘಟನೆ ಸಹಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಕಠಿಣ ಕ್ರಮ ಮುಲಾಜಿಲ್ಲದೇ ತೆಗೆದುಕೊಳ್ಳುತ್ತೇವೆ. ಯಾರೇ ಇದ್ದರು ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಘಟನೆಗೆ ಸಂಬಂಧಿಸಿ ನಿರ್ದಿಷ್ಟ ಉತ್ತರ ನಾಳೆ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ