– ಸುಮಾರು 2,000 ಮಕ್ಕಳಿರುವ ಕೌಶಲ್ಯ ಶಾಲೆಯಲ್ಲಿ ಅಗ್ನಿ ದುರಂತ
ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ತರಗತಿ ನಡೆಯುತ್ತಿದ್ದ ವೇಳೆಯೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ (Chitrakoota Kaushalya School) ಸಂಭವಿಸಿದೆ.
ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಶಿಕ್ಷಕರು ಎಲ್ಲಾ ಮಕ್ಕಳನ್ನು ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು (Kengeri Police) ದೌಡಾಯಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಚಾಮರಾಜನಗರ, ಚಿಕ್ಕಮಗಳೂರಲ್ಲಿ ಭಾರೀ ಮಳೆ – ಧವಸಧಾನ್ಯಕ್ಕೆ ನುಗ್ಗಿದ ನೀರು, ಇತ್ತ ಬೃಹತ್ ಮರಗಳು ಧರಾಶಾಹಿ

ಘಟನೆ ಸಂಭವಿಸಿದ್ದು ಹೇಗೆ?
ಸುಮಾರು 2 ಸಾವಿರ ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ಎಂದಿನಂತೆ ಶಾಲೆ ಪ್ರಾರಂಭವಾಗಿದೆ. 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ಮಕ್ಕಳನ್ನ ಹೊರಗೆ ಕಳುಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 3ನೇ ಮಹಡಿಯನ್ನೂ ಆವರಿಸಿಕೊಂಡಿದೆ.
ಸದ್ಯ 4 ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ತಂಡ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದನ್ನೂ ಓದಿ: ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕುತೂಹಲ ಕೆರಳಿಸಿದ 1 ಗಂಟೆ ಚರ್ಚೆ

ಶಾಲೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳ ಪೋಷಕರ ಸಭೆ ನಡೆಯುತ್ತಿರುವ ವೇಳೆಯೇ ಅವಘಡ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಬಳಿಕ ನೂರಾರು ಮಕ್ಕಳ ಪೋಷಕರು ಆತಂಕದಿಂದ ಶಾಲೆಗೆ ಧಾವಿಸಿದ್ದು, ಶಾಲೆಯ ಗೇಟ್ ಬಳಿ ಜಮಾಯಿಸಿದ್ದರು. ಇದನ್ನೂ ಓದಿ: Exclusive | ಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪ
