ಚಿಯಾನ್ ವಿಕ್ರಮ್‌ಗೆ ಪವನ್ ಕುಮಾರ್ ಆ್ಯಕ್ಷನ್ ಕಟ್

ʻಲೂಸಿಯಾʼ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ಮತ್ತೆ ಸುದ್ದಿಯಲ್ಲಿದ್ದಾರೆ. ಮಾಲಿವುಡ್ ಸ್ಟಾರ್ ಫಯಾದ್ ಫಾಸಿಲ್‌ಗೆ ನಿರ್ದೇಶನ ಮಾಡುತ್ತಿರುವ ಬೆನ್ನಲ್ಲೇ ತಮಿಳಿನ ಸ್ಟಾರ್ ಚಿಯಾನ್ ವಿಕ್ರಮ್‌ಗೆ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.
ನಟ, ನಿರ್ದೇಶಕ, ಬರಹಗಾರ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಪವನ್ ಕುಮಾರ್, ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿರುವ ಹೊಸ ಚಿತ್ರದಲ್ಲಿ ಫಯಾದ್‌ಗೆ ಪವನ್ ನಿರ್ದೇಶನ ಮಾಡುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಚಿಯಾನ್ ವಿಕ್ರಮ್ ಮತ್ತು ಪವನ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕಾಗಿ ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿದೆ.
ಇತ್ತೀಚೆಗಷ್ಟೇ ಸಿನಿಮಾ ಪ್ರಚಾರಕ್ಕೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ ಪವನ್ ಕುಮಾರ್ ಅವರು ಭೇಟಿಯಾಗಿ, ತಮಗೆ ಕಥೆ ಹೇಳಿರುವುದರ ಬಗ್ಗೆ ಚಿಯಾನ್ ವಿಕ್ರಮ್ ರಿವೀಲ್ ಮಾಡಿದ್ದಾರೆ. ಪವನ್ ಕುಮಾರ್ ಬರೆದಿರುವ ಕಥೆ ತುಂಬಾ ಇಷ್ಟವಾಗಿದೆ. ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದು ವಿಕ್ರಮ್ ಹೇಳಿದ್ದಾರೆ. ಈ ಚಿತ್ರದಲ್ಲಿ ಪವರ್‌ಫುಲ್ ಪಾತ್ರದಲ್ಲಿ ವಿಕ್ರಮ್ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್
ಒಟ್ನಲ್ಲಿ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ, ಪವನ್ ಕುಮಾರ್ ದಕ್ಷಿಣದ ಸಿನಿಮಾಗಳಲ್ಲೂ ಛಾಪೂ ಮೂಡಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ ಮತ್ತು ಪವನ್ ಕುಮಾರ್‌ಗೆ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.
Live Tv