ಸಿಡ್ನಿ : ವೆಸ್ಟ್ ಇಂಡೀಸ್ ಮಾಜಿ ಆಟಗಾರ ಕ್ರಿಸ್ ಗೇಲ್ ಆಸ್ಟ್ರೇಲಿಯಾ ಮಾಧ್ಯಮ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ಜಯ ಪಡೆದಿದ್ದು, ಈ ಕುರಿತು ತೀರ್ಪು ನೀಡಿರುವ ಕೋರ್ಟ್ ಗೇಲ್‍ಗೆ 3,00,000 ಆಸ್ಟ್ರೇಲಿಯನ್ ಡಾಲರ್ ಹಣ (ಸುಮಾರು 2.10 ಕೋಟಿ ರೂ.) ಪಾವತಿ ಮಾಡಬೇಕು ಎಂದು ಆದೇಶಿಸಿದೆ.
2015ರಲ್ಲಿ ವಿಶ್ವಕಪ್ ವೇಳೆ ಕ್ರಿಸ್‍ಗೇಲ್ ತಂಗಿದ್ದ ಡ್ರೆಸ್ಸಿಂಗ್ ಕೊಠಡಿಗೆ ಆಗಮಿಸಿದ ಮಹಿಳಾ ಮಸಾಜ್ ಥೆರಪಿಸ್ಟ್ ನೊಂದಿಗೆ ಗೇಲ್ ಆಸಭ್ಯವಾಗಿ ವರ್ತಿಸಿದ್ದರು. ಅಲ್ಲದೇ ಮಹಿಳೆಗೆ ಗೇಲ್ ತಮ್ಮ ಜನನಾಂಗವನ್ನು ತೋರಿಸಿದ್ದರು ಎಂದು ಆಸ್ಟ್ರೇಲಿಯಾದ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿತ್ತು.
Advertisement
ತನ್ನ ಮೇಲಿನ ಈ ನಿರಾಕರಿಸಿದ್ದ ಗೇಲ್ ಯಾವುದೇ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿಲ್ಲ. ತಮ್ಮ ಡ್ರೆಸ್ಸಿಂಗ್ ಕೊಠಡಿಯಲ್ಲಿ ಇಂತಹ ಘಟನೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೇ ಮಾಧ್ಯಮಗಳು ನಮ್ಮ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು.
Advertisement
Advertisement
ತಮ್ಮ ವಿರುದ್ಧ ವರದಿ ಮಾಡಿದ್ದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದ ಗೇಲ್ ವಿಚಾರಣೆ ಎದುರಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಈ ಸುದ್ದಿಗೆ ಸಂಬಂಧಿಸಿದ ಸಾಕ್ಷ್ಯವನ್ನು ಒದಗಿಸುವಲ್ಲಿ ವಿಫಲವಾಗಿತ್ತು.
Advertisement
ಪ್ರಕರಣದ ವಿಚಾರಣೆ ನಡೆಸಿದ ಆಸ್ಟ್ರೇಲಿಯಾದ ದಕ್ಷಿಣ ವೇಲ್ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ಲ್ಯೂಸಿ ಮೆಕಲಮ್, ಮಾಧ್ಯಮ ವರದಿಗಳಿಂದ ಗೇಲ್ ಅವರ ಗೌರವಕ್ಕೆ ಧಕ್ಕೆಯಾಗಿದೆ ಎಂದು ತೀರ್ಪು ನೀಡಿ ಪರಿಹರವಾಗಿ 221,00 ಡಾಲರ್ ನೀಡಬೇಕೆಂದು ಆದೇಶಿಸಿದ್ದಾರೆ.
ಆಸೀಸ್ ಮಾಧ್ಯಮಗಳು ವರದಿ ಮಾಡಿದ್ದ ಘಟನೆ ವೇಳೆ ಗೇಲ್‍ರ ಡ್ರೆಸ್ಸಿಂಗ್ ರೂಮಿನಲ್ಲಿ ದಕ್ಷಿಣ ಆಫ್ರಿಕಾದ ಡ್ವೇನ್ ಸ್ಮಿತ್ ಕೂಡ ತಂಗಿದ್ದರು. ಅಲ್ಲದೇ ಮಾಧ್ಯಮಗಳು ವರದಿ ಸುಳ್ಳು. ಅಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಡ್ವೇನ್ ಸ್ಮಿತ್ ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv