– ಕ್ರಿಸ್ಮಸ್ ಹಬ್ಬದ ಮಹತ್ವವೇನು
ಜಗತ್ತಿಗೆ ಶಾಂತಿ, ಪ್ರೀತಿಯ ಸಂದೇಶ ಸಾರಿದ ದೇವಪುತ್ರ ಯೇಸುವಿನ ಜನ್ಮದಿನದ ಆಚರಣೆಯೇ ಕ್ರಿಸ್ಮಸ್ (Christmas). ಮನುಷ್ಯ ಎಲ್ಲರಿಗೂ ಉಪಯುಕ್ತನಾಗಬೇಕು, ಎಲ್ಲರಲ್ಲಿಯೂ ಒಂದಾಗಿ ಬಾಳಬೇಕು ಮತ್ತು ಒಳ್ಳೆಯದನ್ನ ಕೇಳುವಂತವನಾಗಿರಬೇಕು ಎನ್ನುವುದೇ ಹಬ್ಬದ ಮುಖ್ಯ ಧ್ಯೇಯ.
ಪ್ರತಿ ವರ್ಷ ಡಿಸೆಂಬರ್ 25ರಂದು ದೇಶಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು (Christmas Festival) ಆಚರಿಸುತ್ತಾರೆ. ವಿವಿಧ ಚರ್ಚ್‌ಗಳಲ್ಲಿ ಯೇಸುವಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆ ಭಾರೀ ಗಾತ್ರದ ಕೇಕ್‌ಗಳನ್ನು ಕತ್ತರಿಸುತ್ತಾರೆ. ಪ್ರಮುಖ ನಗರದ ಮಾಲ್‌ಗಳಲ್ಲಿಯೂ ವಿಶೇಷ ಕ್ರಿಸ್ಮಸ್ ದೀಪಾಲಂಕಾರ, ಕ್ರಿಸ್ಮಸ್ ಟ್ರೀ (Christmas Tree) ಸ್ಥಾಪಿಸಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸುತ್ತಾರೆ. ಇದನ್ನೂ ಓದಿ: ಹೊಸವರ್ಷ ಆಚರಣೆ – ಮಹಿಳೆಯರ ರಕ್ಷಣೆಗೆ ಮುಂದಿನ ವಾರದಲ್ಲಿ ಗೈಡ್‌ಲೈನ್ಸ್: ಬೆಂಗ್ಳೂರು ಪೊಲೀಸ್
Advertisement
Advertisement
ಈ ಬಾರಿ ಏನು ವಿಶೇಷ?
ಈ ಬಾರಿಯ ಕ್ರಿಸ್ಮಸ್ ಹಬ್ಬಕ್ಕೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ದೇಶದಲ್ಲೇ ಅತಿದೊಡ್ಡ 100 ಅಡಿ ಎತ್ತರದ ಕ್ರಿಸ್ಮಸ್ ಟ್ರೀಯನ್ನು ಅನಾವರಣಗೊಳಿಸಲಾಗಿದೆ. ಇದರೊಂದಿಗೆ ನೀರು ಹಾಗೂ ಸಂಗೀತ ಕಾರಂಜಿಯನ್ನೂ ಆಯೋಜಿಸಲಾಗಿದೆ. ಇದರ ಪಕ್ಕದಲ್ಲೇ ಸಾಂತಾಕ್ರೂಸ್ ವೇಶದಲ್ಲಿರುವ ವ್ಯಕ್ತಿಗೆ ಕ್ರಿಸ್ಮಸ್ ವಿಶ್ ಮಾಡುವ ಮೂಲಕ ಜನರು ಸಂತಸ ಹಂಚಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಬೆಂಗಳೂರಿನ ವಿವಿಧೆಡೆ ಕೇಸ್ ಉತ್ಸವಗಳನ್ನೂ ಹಮ್ಮಿಕೊಳ್ಳಲಾಗಿದೆ.
Advertisement
ಹೊಸ ವರ್ಷಕ್ಕೆ ಕೆಲವೇ ದಿನಗಳ ಮುನ್ನ ಬರುವ ಈ ಹಬ್ಬದಲ್ಲಿ ಸ್ಥಳೀಯರು ಹಾಗೂ ಯುವಸಮೂಹದ ಸಂಭ್ರಮಕ್ಕೆ ಪಾರವೇ ಇರುವುದಿಲ್ಲ. ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ, ಕರೋಲ್ ಸಂಗೀತ ಕಛೇರಿಗಳಿಗೂ ಬ್ರೇಕ್ ಹಾಕಲಾಗಿತ್ತು. ಸೀಮಿತ ಪೂಜೆ ಪ್ರಾರ್ಥನೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಅದ್ಧೂರಿಯಾಗಿ ಈ ಉತ್ಸವಗಳು ಸಾಗುತ್ತಿವೆ. ಇದನ್ನೂ ಓದಿ: ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್ ಜಾಮ್ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ
Advertisement
ಕ್ರಿಸ್ಮಸ್ ಹಬ್ಬದ ಪ್ರಾಮುಖ್ಯತೆ:
ಒಂದು ಕಾಲದಲ್ಲಿ ಕ್ರಿಸ್ಮಸ್ ಹಬ್ಬವನ್ನು ಪಾಶ್ಚಿಮಾತ್ಯ ದೇಶಗಳಲ್ಲಿ ಮತ್ತು ಕ್ರೈಸ್ತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮಾತ್ರ ಆಚರಿಸಲಾಗುತ್ತಿತ್ತು. ಆದರಿಂದು ಪ್ರಪಂಚದಾದ್ಯಂತ ಆಚರಿಸುವ ಹಬ್ಬವಾಗಿ ಇದು ಮಾರ್ಪಟ್ಟಿದೆ. ಜನರನ್ನು ಪಾಪದಿಂದ ಮುಕ್ತಗೊಳಿಸಲು ಮತ್ತು ಜನರಿಗೆ ಒಳಿತನ್ನು ಮಾಡಲು ದೇವರು ತನ್ನ ಮಗನನ್ನು ಭೂಮಿಗೆ ಕಳುಹಿಸಿದನು ಮತ್ತು ಜನರನ್ನು ಪಾಪದಿಂದ ಮುಕ್ತಗೊಳಿಸುವ ಹೋರಾಟದಲ್ಲಿ ಯೇಸು ಕ್ರಿಸ್ತನು ತನ್ನ ಪ್ರಾಣ ತ್ಯಾಗ ಮಾಡಿದನು ಎಂಬ ನಂಬಿಕೆ ಇದೆ. ಈ ಎಲ್ಲ ನೆನಪಿನೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಗುತ್ತದೆ ಎನ್ನುತ್ತಾರೆ ಮೈಸೂರು ಸೇಂಟ್ ಫಿಲೋಮಿನಾ ಚರ್ಚ್‌ನ ಪಾದ್ರಿ ಸ್ಟ್ಯಾನಿ ಡಿ. ಅಲ್ಮೆಡಾ.
ಕರೋಲ್ ಕಂಪು:
ಪ್ರತಿವರ್ಷ ಡಿಸೆಂಬರ್ 24ರಂದು ರಾತ್ರಿ 12 ಗಂಟೆಯಿಂದ ಬಲಿಪೂಜೆಯೊಂದಿಗೆ ಕ್ರಿಸ್ಮಸ್ ಹಬ್ಬ ಆರಂಭವಾಗುತ್ತದೆ. ಬಲಿಪೂಜೆಯ ನಂತರ ಯೇಸುವಿನ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಾರೆ. ನಂತರ ರಾತ್ರಿಯಿಡೀ ಕರೋಲ್ ಗೀತಗಾಯನವಿರುತ್ತದೆ. ಹಬ್ಬಕ್ಕಿಂತ ಮೊದಲೇ ಆರಂಭವಾಗುವ ಈ ಸಂಪ್ರದಾಯದಲ್ಲಿ ಯುವಕರ ಗುಂಪುಗಳು ರಾತ್ರಿ ತಮ್ಮ ಸನಿಹದ ಪ್ರದೇಶದ ಮನೆ ಮನೆಗಳಿಗೆ ತೆರಳಿ ಕರೋಲ್ ಗಳನ್ನು (ಭಜನೆ ಅಥವಾ ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ಮಸ್ ಹಾಡುಗಳು) ಹಾಡುತ್ತಾರೆ. ಆ ಮೂಲಕ ಯೇಸುಕ್ರಿಸ್ತನು ಈ ಮನೆಯಲ್ಲಿ ಹುಟ್ಟಿದ್ದಾನೆ ಮತ್ತು ಈ ಮನೆಯಲ್ಲಿ ಜೀವಿಸುತ್ತಾನೆ ಎಂದು ಪವಿತ್ರ ಭಾವನೆ ಮೂಡಿಸುವ ಸಂದೇಶ ಸಾರಲಾಗುತ್ತದೆ ಎನ್ನುತ್ತಾರೆ ಅಲ್ಮೆಡಾ. ಇದನ್ನೂ ಓದಿ: ಹೊಸ ವರ್ಷಾಚರಣೆ – ಬ್ರಿಗೇಡ್ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ
ಕ್ರಿಸ್ಮಸ್ ಹಿನ್ನೆಲೆ ಏನು?
ಕ್ರಿಸ್ಮಸ್ ಆಚರಣೆಯು ಹಲವು ಶತಮಾನಗಳ ಹಿಂದಿನದ್ದು. ಕ್ರಿಸ್ಮಸ್ ಅನ್ನು ಮೊದಲು ರೋಮ್ ದೇಶದಲ್ಲಿ ಆಚರಿಸಲಾಯಿತು ಎಂದು ಹೇಳಲಾಗುತ್ತದೆ. ಆದರೆ ಕ್ರಿಸ್‌ಮಸ್‌ಗೆ ಮುನ್ನ ರೋಮ್‌ನಲ್ಲಿ ಡಿಸೆಂಬರ್ 25ರ ದಿನವನ್ನು ಸೂರ್ಯ ದೇವರ ಜನ್ಮದಿನವಾಗಿ ಆಚರಿಸಲಾಯಿತು. ಆ ಸಮಯದಲ್ಲಿ, ರೋಮ್‌ನ ಚಕ್ರವರ್ತಿಗಳು ಸೂರ್ಯದೇವನನ್ನು ತಮ್ಮ ಮುಖ್ಯ ದೇವರಾಗಿ ಪರಿಗಣಿಸುತ್ತಿದ್ದರು ಮತ್ತು ಸೂರ್ಯದೇವನನ್ನು ಪೂಜಿಸುತ್ತಿದ್ದರು. ನಂತರ ಕಾಲಘಟ್ಟದಲ್ಲಿ ರೋಮ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಚಾರವು ವೇಗವಾಗಿ ಬೆಳೆಯಲು ಪ್ರಾರಂಭಿಸಿತು. ರೋಮ್‌ನಲ್ಲಿ ಕ್ರೈಸ್ತ ಧರ್ಮದ ಅನುಯಾಯಿಗಳ ಸಂಖ್ಯೆ ಹೆಚ್ಚಾಯಿತು. ಇದಾದ ನಂತರ ಕ್ರಿ.ಶ.336ರಲ್ಲಿ ಕ್ರೈಸ್ತ ಧರ್ಮದ ಅನುಯಾಯಿಗಳು ಯೇಸುಕ್ರಿಸ್ತನನ್ನು ಸೂರ್ಯದೇವನ ಅವತಾರವೆಂದು ಒಪ್ಪಿಕೊಂಡರು. ಅಂದಿನಿಂದ ಕ್ರಿಸ್ಮಸ್ ಹಬ್ಬವನ್ನು ಯೇಸುಕ್ರಿಸ್ತನ ಜನ್ಮದಿನವಾಗಿ ಆಚರಿಸುವ ಸಂಪ್ರದಾಯವು ಬೆಳೆದುಬಂದಿತು ಎನ್ನುತ್ತಾರೆ ಹಿರಿಯ ಪಾದ್ರಿಗಳು.