ಚೆನ್ನೈ: ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್ (Christopher W. Hodges) ಅವರು ಚೆನ್ನೈನ ಅಮೆರಿಕ (America) ದೂತವಾಸದ ಮುಖ್ಯಸ್ಥರಾಗಿ (ಕಾನ್ಸಲ್ ಜನರಲ್) 2023ರ ಜುಲೈ 31ರಂದು ಅಧಿಕಾರ ವಹಿಸಿಕೊಂಡರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾನ್ಸಲ್ ಜನರಲ್ (Consul General) ಹಾಡ್ಜಸ್, ಅಮೆರಿಕ-ಭಾರತದ (India) ಸಹಭಾಗಿತ್ವದ ಮಹತ್ವದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವ ಗೌರವ ನನ್ನದು. ನಾವು ಸ್ಥಳೀಯ ಮತ್ತು ಪ್ರಾದೇಶಿಕವಾಗಿ ಮಾಡುವ ಕೆಲಸಗಳು ಉಭಯ ದೇಶಗಳ ನಡುವಣ ಶ್ರೀಮಂತ ವಾಣಿಜ್ಯ ಮತ್ತು ಶೈಕ್ಷಣಿಕ ಸಂಬಂಧಗಳು ಮತ್ತು ಬಾಹ್ಯಾಕಾಶ ವಲಯವೂ ಸೇರಿದಂತೆ ದ್ವಿಪಕ್ಷೀಯ ಸಹಭಾಗಿತ್ವವನ್ನು ವಿಸ್ತಾರಗೊಳಿಸುವಲ್ಲಿ ಕೊಡುಗೆ ನೀಡುತ್ತವೆ. ನಮ್ಮ ಜನರ ನಡುವಿನ ಬಾಂಧವ್ಯವನ್ನು ಇನ್ನಷ್ಟು ಹತ್ತಿರ ತರುವ ವಿಷಯಗಳಾದ ಅಮೆರಿಕಾದ ಪೌರರಿಗೆ ಬೆಂಬಲ ನೀಡುವುದು ಹಾಗೂ ಕಾನ್ಸಲರ್ ಸೇವೆಗಳನ್ನು ಒದಗಿಸುವುದಕ್ಕೆ ಹೆಮ್ಮೆಯಿದೆ ಎಂದರು.
- Advertisement 2
- Advertisement 3
ಅಮೆರಿಕ- ಭಾರತದ ಸಂಬಂಧವು ಎರಡು ಸರ್ಕಾರಗಳ ನಡುವೆ ಮಾತ್ರವಲ್ಲ, ಉಭಯ ದೇಶಗಳ ಜನರ ನಡುವಿನ ಸಂಬಂಧ ಎಂಬುದನ್ನು ನಮ್ಮ ಪ್ರಯತ್ನಗಳು ಎತ್ತಿ ತೋರುತ್ತವೆ. ನಮ್ಮ ಪ್ರಾಂತ್ಯದಲ್ಲಿ ಬರುವ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ನಿಕೋಬಾರ್ ದ್ವೀಪ ಸಮೂಹ, ಲಕ್ಷದ್ವೀಪ ಮತ್ತು ಪುದುಚೆರಿಗಳಲ್ಲಿ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಕಾನ್ಸಲ್ ಜನರಲ್ ಹೇಳಿದರು. ಇದನ್ನೂ ಓದಿ: ಹರಿಯಾಣದಲ್ಲಿ ನಿಲ್ಲದ ಕೋಮು ಘರ್ಷಣೆ – ನಾಲ್ವರು ಸಾವು; 30 ಕ್ಕೂ ಹೆಚ್ಚು ಮಂದಿಗೆ ಗಾಯ
- Advertisement 4
ಚೆನ್ನೈನಲ್ಲಿನ ಅಮೆರಿಕ ದೂತವಾಸದ ಕಾನ್ಸಲ್ ಜನರಲ್ ಆಗಿ ಅಧಿಕಾರವಹಿಸಿಕೊಳ್ಳುವ ಮುನ್ನ, ಹಾಡ್ಜಸ್ ಅವರು ಕೋಆರ್ಡಿನೇಟರ್ ಫಾರ್ ಆಫ್ಘನ್ ರಿಲೊಕೇಷನ್ ಎಫಟ್ರ್ಸ್(ಕೇರ್) ಕಚೇರಿಯ ಹಿರಿಯ ಸಲಹೆಗಾರರಾಗಿದ್ದರು. ಅದಕ್ಕೂ ಮುನ್ನ ಬ್ಯೂರೋ ಫಾರ್ ನಿಯರ್ ಈಸ್ಟ್ರನ್ ಅಫೇರ್ಸ್ ನಲ್ಲಿ ಅಸಿಸ್ಟೆನ್ಸ್ ಕೋಆರ್ಡಿನೇಷನ್ ಅಂಡ್ ಪ್ರೆಸ್ ಅಂಡ್ ಪಬ್ಲಿಕ್ ಡಿಪ್ಲೊಮಸಿ ವಿಭಾಗದ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿಯಾಗಿ ಹಾಗೂ ಇಸ್ರೇಲಿ-ಪ್ಯಾಲೆಸ್ಟಿನಿಯನ್ ವ್ಯವಹಾರಗಳ ಉಪ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಕೊನೆಯದಾಗಿ ಜೆರೂಸಲೇಂನ ರಾಯಭಾರ ಕಚೇರಿಯಲ್ಲಿ ಅಸಿಸ್ಟೆಂಟ್ ಡೆಪ್ಯುಟಿ ಚೀಫ್ ಆಫ್ ಮಿಷನ್ ಮತ್ತು ಚೀಫ್ ಆಫ್ ದಿ ಪ್ಯಾಲೆಸ್ತೇನಿಯನ್ ಅಫೇರ್ಸ್ ಯೂನಿಟ್ ನಲ್ಲಿ ಕೆಲಸ ನಿರ್ವಹಿಸಿದ್ದಾರೆ.
ಹಾಡ್ಜಸ್ ಅವರು 2000ರಲ್ಲಿ ವಿದೇಶಾಂಗ ಸೇವೆಗೆ ಸೇರಿಕೊಂಡರು. ಅವರು ಜೆರುಸಲೇಂ, ಹನೊಯ್, ವಿಯೆಟ್ನಾಂ ಮತ್ತು ಅಕ್ಕ್ರಾ, ಘಾನಾದಲ್ಲಿ ಪಬ್ಲಿಕ್ ಅಫೇರ್ಸ್ ಆಫೀಸರ್ ಆಗಿ ಸೇವೆ ಸಲ್ಲಿಸಿದರು. ಅಲ್ಲದೆ ಆಸ್ಟ್ರಿಯಾ, ಜರ್ಮನಿ, ಸ್ವಿಟ್ಜರ್ ಲೆಂಡ್ ಮತ್ತು ಲಿಷೆನ್ ಸ್ಟೀನ್ ಗಳಲ್ಲಿ ಆಫೀಸ್ ಆಫ್ ದಿ ಸೆಂಟ್ರಲ್ ಯೂರೋಪಿಯನ್ ಅಫೇರ್ಸ್ ನಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿ ದುಡಿದಿದ್ದಾರೆ. ಸುವಾ, ಫಿಜಿ ಮತ್ತು ಫ್ರಾಂಕ್ ಫರ್ಟ್, ಜರ್ಮನಿಗಳಲ್ಲೂ ಕೆಲಸ ಮಾಡಿದ್ದಾರೆ.
Web Stories