– ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕೊಲೆ ಪ್ರಕರಣ; 494 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ಹುಬ್ಬಳ್ಳಿ: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ (CID) ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
Advertisement
ಹುಬ್ಬಳ್ಳಿಯ (Hubballi) ಮೂರನೇ ಅಧಿಕ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ಕೋರ್ಟ್‌ಗೆ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ, ಗಿರೀಶ್‌ನಿಂದ ದೂರವಾಗಿದ್ದಕ್ಕೆ ಅಂಜಲಿ ಕೊಲೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನಾಯಿಯಿಂದ ಕಚ್ಚಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮಹಿಳೆ ಸಾವು
Advertisement
Advertisement
ಮೇ 15 ರಂದು ಅಂಜಲಿ ಅಂಬಿಗೇರ ಹತ್ಯೆಯಾಗಿತ್ತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಗಿರೀಶ್ ಅಲಿಯಾಸ್ ವಿಶ್ವ ಕೊಲೆ ಮಾಡಿದ್ದ. ಸಿಸಿಟಿವಿ, ಪ್ರತ್ಯಕ್ಷ ಸಾಕ್ಷಿ, ಹಂತಕನ ತಾಯಿ, ಗಿರೀಶ್ ಕೆಲಸ ಮಾಡ್ತಿದ್ದ ಹೋಟೆಲ್ ಸಿಬ್ಬಂದಿ ಸೇರಿ 85 ಸಾಕ್ಷಿಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
ಗಿರೀಶ್‌ನಿಂದ ಅಂಜಲಿ ದೂರವಾಗಿದ್ದಕ್ಕೆ ಕೊಲೆಯಾಗಿದೆ. ಆರೋಪಿ ಗಿರೀಶ್ ಮೈಸೂರಿನ ಮಹಾರಾಜ ಹೋಟೆಲ್ ಆವರಣದ ಎಂಎಸ್ಸಿ ಪಬ್ ಆ್ಯಂಡ್ ಬಾರ್‌ನಲ್ಲಿ ಕೆಲಸ ಮಾಡ್ತಿದ್ದ. ಕೆಲಸ ಮಾಡುವ ಸಮಯದಲ್ಲಿ 3-4 ಬಾರಿ ಗಿರೀಶ್ ಭೇಟಿಗೆ ಅಂಜಲಿ ತೆರಳಿದ್ದಳು. 2024 ರ ಎಪ್ರಿಲ್‌ನಲ್ಲಿ ಇಬ್ಬರ ನಡುವೆ ಮನಸ್ತಾಪವಾಗಿತ್ತು. ಅಂಜಲಿ ಈ ವೇಳೆ ಗಿರೀಶ್ ಕರೆ ಸ್ವೀಕರಿಸಿಲ್ಲ. ಇದಲ್ಲದೆ ಅಂಜಲಿ, ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು. ಹೀಗಾಗಿ ಅಂಜಲಿ ಮನೆಗೆ ಬಂದು ಕೊಲೆ ಮಾಡಿದ್ದಾನೆಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಕೃತ್ಯ, ಇದೊಂದು ಪೂರ್ವಯೋಜಿತ ಪ್ಲ್ಯಾನ್- ಸುನೀಲ್ ಕುಮಾರ್
ಮೈಸೂರಿನಿಂದಲೇ ಚಾಕು ತಂದಿದ್ದ ಗಿರೀಶ್. ಮೈಸೂರಿನ ಬಸ್ ನಿಲ್ದಾಣದ ಪಕ್ಕ ಗುರುತು ಸಿಗಬಾರದು ಅನ್ನೋ ಕಾರಣಕ್ಕೆ ಮಾಸ್ಕ್ ಖರೀದಿ ಮಾಡಿದ್ದ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಕೊನೆಗೆ ಮೇ 17 ರಂದು ರೈಲ್ವೆ ಪೊಲೀಸರ ಕೈಗೆ ಸಿಕ್ಕಿ ಬಿದ್ದದ್ದ.
ಮೈಸೂರಿನಿಂದ ಬೆಳಗಾವಿಗೆ ವಿಶ್ವಮಾನವ ರೈಲಿನಲ್ಲಿ ಪ್ರಯಾಣ ಮಾಡುವಾಗ ಸಿಕ್ಕಿಬಿದ್ದದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿಕೊಂಡಿದ್ದ. ದಾವಣಗೆರೆ ಬಳಿ ರೈಲಿನಿಂದ ಬಿದ್ದು ಗಾಯ ಮಾಡಿಕೊಂಡಿದ್ದ. ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆ ನಾಲ್ಕು ಜನ ಪೊಲೀಸ್ ಅಧಿಕಾರಿಗಳ ತಲೆದಂಡವೂ ಆಗಿತ್ತು. ಇದೀಗ ಕೊಲೆ ನಡೆದ 98 ದಿನಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.