ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ (KPSC Scam Case) ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ (Shivashankarappa Sahukar) ಸಿಐಡಿ ಬುಲಾವ್ ನೀಡಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಕೆಪಿಎಸ್‌ಸಿ ಮಾಜಿ ಅಧ್ಯಕ್ಷರಿಗೆ ಸಿಐಡಿ (CID) ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: KPSC Scam | ಗ್ಯಾನೇಂದ್ರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲು
ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಶಿವಶಂಕರಪ್ಪ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಬಂಧನದ ಭೀತಿಯಲ್ಲಿರುವ ಮಾಜಿ ಅಧ್ಯಕ್ಷರಿಗೆ ಸಿಐಡಿ ಬುಲಾವ್ ಕೊಟ್ಟಿದೆ.
ಇಂದು ಅಥವಾ ನಾಳೆ ವಿಚಾರಣೆಗೆ ಶಿವಶಂಕರಪ್ಪ ಸಾಹುಕಾರ್ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಡಿಗ್ರಿಯಲ್ಲಿ ಎರೆಡೆರಡು ಬಾರಿ ಫೇಲ್ – ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ರ‍್ಯಾಂಕ್!
