– 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ (Jain Monk Nandi Kamakumara Swamiji) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.
ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು ಜೈನಮುನಿ ಜೊತೆ ಹೆಚ್ಚು ಒಡನಾಟ ಹೊಂದಿದ್ದನು. ಇತ್ತ ಆರೋಪಿಗಳು ಜೈನಮುನಿ ಬಳಿ 6 ಲಕ್ಷ ಹಣ ಪಡೆದಿದ್ದರು. ಆರೋಪಿಗಳನ್ನು ಹೀಯಾಳಿಸಿ ನಿಂದನೆ ಜೊತೆ ಬೈದ್ದಿದ್ದರು. ಜೈನಮುನಿ ಬೈಗುಳದಿಂದ ಆರೋಪಿ ನಾರಾಯಣ ಕೊಲೆಗೆ ಪ್ಲಾನ್ ಮಾಡಿದ್ದ. ಜೈನಮುನಿ ಒಬ್ಬರೇ ವಾಸವಿದ್ದರಿಂದ ಆರೋಪಿ ಹೆಚ್ಚಿನ ಒಡನಾಟ ಬೆಳೆಸಿದ್ದನು. ಅಂತೆಯೇ ಇತರ ಆರೋಪಿಗಳ ಜೊತೆ ಸೇರಿ ಕೊಲೆ ಮಾಡಿ ಗುರುತು ಪತ್ತೆಯಾಗದಂತೆ ದೇಹ ಕತ್ತರಿಸಿದ. ಬಳಿಕ ಕೊಲೆಗೆ ಬಳಸಿದ್ದ ಮಚ್ಚನ್ನು ಮೇಲ್ಸೇತುವೆ ಮೇಲೆ ಬಿಸಾಡಿದ್ದರು. ಇದನ್ನೂ ಓದಿ: ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?
Advertisement
Advertisement
ಈ ಮಾರಕಾಸ್ತ್ರಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸದ್ಯ 10 ಮಂದಿಯ ಸಾಕ್ಷ್ಯಾಧಾರ, 164 ಹೇಳಿಕೆಗಳ ಜೊತೆ ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಿ 500ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.