ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಮೇಲೆ ಸಿಐಡಿ (CID) ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಶ್ವೇಶ್ವರಯ್ಯ ಟವರ್‌ನಲ್ಲಿರುವ ಭೋವಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ನಾಲ್ಕು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಅಕ್ರಮಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ಆರೋಪದ ಮೇಲೆ ದಾಳಿ ಮಾಡಿರುವ ಸಿಐಡಿ ಅಧಿಕಾರಿಗಳು ಅಕ್ರಮಕ್ಕೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2021-22ನೇ ಸಾಲಿನಲ್ಲಿ ಭೋವಿ ನಿಗಮದಿಂದ ಉದ್ಯಮಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ನಡೆದಿದ್ದ ಅವ್ಯವಹಾರ ಆರೋಪದ ಮೇಲೆ ದೂರು ದಾಖಲಾಗಿತ್ತು. ಅಕ್ರಮ ಸಂಬಂಧ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು. 10 ಕೋಟಿಗೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಸರ್ಕಾರ ಇತ್ತೀಚಿಗೆ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರೋಪಕ್ಕೆ ಉತ್ತರಿಸುವ ಬದಲಾಗಿ ಬ್ಲ್ಯಾಕ್‌ಮೇಲ್ ಪಾಲಿಟಿಕ್ಸ್ : ಸಿಎಂ ವಿರುದ್ಧ ಸಿಟಿ ರವಿ ಕಿಡಿ
Advertisement
Advertisement
ತನಿಖೆಗಿಳಿದಿರುವ ಸಿಐಡಿ ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪ ಅವರನ್ನು ಬಂಧನ ಮಾಡಿದೆ. ಸುಬ್ಬಪ್ಪ ಅಕ್ರಮ ವರ್ಗಾವಣೆಯ ಪ್ರಕರಣ ಮುಚ್ಚಿಹಾಕಲು ಕಡತ ಕದ್ದೊಯ್ದಿದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಲೆಕ್ಕಪತ್ರ ಕಡತ, ನಗದು ಪುಸ್ತಕ, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳ ಕಳವು ಮಾಡಿದ್ದ ಆರೋಪದ ಮೇಲೆ ಬಂಧನ ಮಾಡಿ ಸದ್ಯ ಸಿಐಡಿ ತನಿಖೆ ಮುಂದುವರಿಸಿದೆ. ಇದನ್ನೂ ಓದಿ: MUDA Scam | ಸಿಎಂ ವಿರುದ್ಧ ಖಾಸಗಿ ದೂರು – ವಿಚಾರಣೆ ಮುಂದೂಡಿಕೆ
Advertisement