ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇದೀಗ ತಂದೆಯಂತೆಯೇ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಅವರು ವೆಬ್ ಸೀರಿಸ್ ಒಂದಕ್ಕೆ ಬಣ್ಣ ಹಚ್ಚಿದ್ದು, ಈಗ ಈ ವೆಬ್ ಸೀರಿಸ್ ಶೂಟಿಂಗ್ ಊಟಿಯ ವಿವಿಧ ಸ್ಥಳಗಳಲ್ಲಿ ನಡೆಯುತ್ತಿದೆ. ತಮಗೆ ಬೋರು ಆಗಬಾರದು ಎಂದೇ ಫ್ರೆಂಡ್ಸ್ ಅನ್ನೂ ಜೊತೆಗೆ ಅವರು ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ
Advertisement
ದಿ ಆರ್ಚೀಸ್ ಹೆಸರಿನಲ್ಲಿ ತಯಾರಾಗುತ್ತಿರುವ ಈ ವೆಬ್ ಸೀರಿಸ್ ನಲ್ಲಿ ಸುಹಾನಾ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಬಹುತೇಕ ದೃಶ್ಯಗಳಲ್ಲಿ ಇವರೇ ಇರುವುದರಿಂದ ಕಷ್ಟವಾದರೂ ಇಷ್ಟಪಟ್ಟು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರಂತೆ. ಶೂಟಿಂಗ್ ವೇಳೆಯಲ್ಲಿ ಪದೇ ಪದೇ ಅವರು ತಂದೆಯನ್ನು ನೆನಪಿಸಿಕೊಳ್ಳುತ್ತಿದ್ದಾರಂತೆ. ಇದನ್ನೂ ಓದಿ : ಕೆಜಿಎಫ್ 2 ಐವತ್ತು ದಿನ ಪೂರೈಸಿದ ಬೆನ್ನಲ್ಲೆ ಮತ್ತೊಂದು ಹೊಸ ಸಿನಿಮಾ ರಿಲೀಸ್ ಘೋಷಣೆ
Advertisement
Advertisement
ಶೂಟಿಂಗ್ ಅಂದರೆ, ಅಲ್ಲಿ ಬಿಂದಾಸ್ ಆಗಿ ಇರಬಹುದು ಎನ್ನುವ ಕಲ್ಪನೆ ನನ್ನಲ್ಲಿತ್ತು. ಈಗ ಅದರ ಕಷ್ಟ ಗೊತ್ತಾಗುತ್ತಿದೆ. ಅಪ್ಪಾಜಿ ಅಷ್ಟೊಂದು ವರ್ಷ ಅದು ಹೇಗೆ ಸಹಿಸಿಕೊಂಡು ಬಂದಿದ್ದಾರೋ ಎಂದು ನಿರ್ದೇಶಕರ ಮುಂದೆ ತಂದೆಯನ್ನು ಹಾಡಿ ಹೊಗಳಿದ್ದಾರಂತೆ. ಅಲ್ಲದೇ ತಮ್ಮೊಂದಿಗೆ ಕೆಲಸ ಮಾಡುತ್ತಿರುವ ಖುಷಿ ಕಪೂರ್ ಮತ್ತು ಜೋಯಾ ಅಖ್ತರ್ ಬಳಿಯೂ ತಮ್ಮ ತಂದೆಯನ್ನು ಗುಣಗಾನ ಮಾಡಿದ್ದಾರಂತೆ ಸುಹಾನಾ.