ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Advertisement
ಒಂದು ವರ್ಷದ ನಂತರ ಆಫ್ಘನ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ
Advertisement
Advertisement
ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್‍ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ
ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.