ನವದೆಹಲಿ: ಸಂಸತ್ ಭವನದಲ್ಲಿ ಭದ್ರತಾ ನಿಯಮಗಳ ಉಲ್ಲಂಘನೆ (Parliament Security Breach) ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮಗ್ರ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (CISF) ಹಸ್ತಾಂತರಿಸಲು ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳಾದ ಪರಮಾಣು ಮತ್ತು ಏರೋಸ್ಪೇಸ್ ಡೊಮೇನ್, ಸಿವಿಲ್ ಏರ್‌ಪೋರ್ಟ್‌ಗಳು (Civil Airports) ಮತ್ತು ದೆಹಲಿ ಮೆಟ್ರೋ ನಿಲ್ದಾಣಗಳಿಗೆ (Metro Stations) ಭದ್ರತೆ ನೀಡುತ್ತಿದೆ. ಇದನ್ನೂ ಓದಿ: ಅಜಿತ್ ಪವಾರ್, ಶಿಂಧೆಯ ಪೈಕಿ ಯಾರು ಮೊದಲು ಬರುತ್ತಾರೋ ಕಾದುನೋಡಿ – ಕರ್ನಾಟಕ ಕಾಂಗ್ರೆಸ್ ಬಗ್ಗೆ ಹೆಚ್‌ಡಿಕೆ ಬಾಂಬ್
ಕೇಂದ್ರ ಗೃಹಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಂಸತ್‌ನಲ್ಲಿ ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯೋಜನೆ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಎಸ್‌ಎಫ್‌ನ ತಜ್ಞರು, ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಂಸತ್‌ನ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ
ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಮಿತ್ರ ಕಟ್ಟಡಗಳನ್ನು ಸಿಐಎಸ್‌ಎಫ್‌ನ ಸಮಗ್ರ ಭದ್ರತೆಯ ಅಡಿಯಲ್ಲಿ ತರಲಾಗುವುದು, ಸಂಸತ್ತಿನ ಭದ್ರತಾ ಸೇವೆ (ಪಿಎಸ್‌ಎಸ್), ದೆಹಲಿ ಪೊಲೀಸ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ (PDG) ಭದ್ರತೆಯಲ್ಲಿ ಮುಂದುವರಿಯಲಿದೆ. ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಮೈಸೂರು ಮೂಲದ ಮನೋರಂಜರ್ ಮತ್ತು ಸಾಗರ್ ಶರ್ಮಾ ಹೆಸರಿನ ಇಬ್ಬರು ಯುವಕರು ಭದ್ರತಾ ನಿಯಮ ಉಲ್ಲಂಘಿಸಿ ಸ್ಮೋಕ್ ಬಾಂಬ್ ಸ್ಫೋಟಿಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ