Connect with us

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ವಿರಾಟ್ ಮನವಿ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ವಿರಾಟ್ ಮನವಿ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಎಲ್ಲರೂ ಕಟ್ಟುನಿಟ್ಟಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಎಂದು ವಿನಂತಿಸಿಕೊಂಡಿದ್ದಾರೆ. ಐಪಿಎಲ್ ಟೋರ್ನಿಯಲ್ಲಿ ಬ್ಯುಸಿಯಾಗಿರುವ ವಿರಾಟ್ ಇದೀಗ ಮಹಾಮಾರಿ ಕೋವಿಡ್ ವಿರುದ್ಧವಾಗಿ ಜಾಗೃತಿಯನ್ನು ಮೂಡಿಸಿದ್ದಾರೆ.

ದೇಶವು 2ನೇ ಬಾರಿ ಕೊರೊನಾ ಅಲೆಗೆ ಸಿಲುಕಿಕೊಂಡಿದೆ. ಈ ವೈರಸ್ ವಿರುದ್ಧವಾಗಿ ಹೋರಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಅಗತ್ಯ ವಸ್ತುಗಳ ಖರೀದಿಗೆ ಹೋಗುವಾಗ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ, ಹ್ಯಾಂಡ್ ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಕೊಯ್ಲಿ ಮನವಿ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯನ್ನು ಎಲ್ಲರೂ ತಪ್ಲದೆ ಪಾಲಿಸಿ. ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ಕಾರ ಮತ್ತು ಪೊಲೀಸ್ ಜೊತೆಗೆ ಕೈಜೋಡಿಸಿ. ನಾನು ಈ ಮೊದಲು ಹೇಳಿದ್ದಂತೆ ನಾವು ಸುರಕ್ಷಿತವಾಗಿದ್ದರೆ ದೇಶವು ಸುರಕ್ಷಿತವಾಗಿ ಇದ್ದಂತೆ ಆಗಿದೆ. ಕೊರೊನಾ ಜಾಗೃತಿಯನ್ನು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

Advertisement
Advertisement