ಕೋಲ್ಕತ್ತಾ: ಗಡಿಯನ್ನು ಸುಭದ್ರಗೊಳಿಸುವುದು ಕೇಂದ್ರದ ಕೆಲಸ. ಅಸ್ಸಾಂನಲ್ಲಿ ಒಂದೇ ಪಕ್ಷದ ಸರ್ಕಾರವಿದ್ದರೆ ಮಾತ್ರ ನ್ಯಾಯಯುತವಾಗಿ ಕೆಲಸ ಮಾಡುತ್ತೇವೆ ಎಂಬುವುದರಲ್ಲಿ ಅರ್ಥವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ
Advertisement
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ನುಸುಳುವಿಕೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಕೇಂದ್ರವು ಬಂಗಾಳ ಸರ್ಕಾರದಿಂದ ಬೆಂಬಲವನ್ನು ಪಡೆಯುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಅಭಿಷೇಕ್ ಬ್ಯಾನರ್ಜಿ ಇಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಾಮಗಾರಿಗೆ ಅಗೆದಿದ್ದ ಗುಂಡಿಗೆ ಬಿದ್ದು ಆಸ್ಪತ್ರೆ ಮುಂದೆಯೇ 15 ವರ್ಷದ ಬಾಲಕಿ ಸಾವು
Advertisement
Advertisement
ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಕಾಂಗ್ರೆಸ್ ಸಂಸದ ಮತ್ತು ಅಸ್ಸಾಂನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಿಪುನ್ ಬೋರಾ ಅವರ ನೇತೃತ್ವದಲ್ಲಿ ತೃಣಮೂಲ ಅಸ್ಸಾಂ ರಾಜ್ಯ ಸಮಿತಿಯನ್ನು ರಚಿಸಲಾಯಿತು. ನಂತರ ಮೊದಲ ಬಾರಿಗೆ ಗುವಾಹಟಿಗೆ ಅಭಿಷೇಕ್ ಬ್ಯಾನರ್ಜಿ ಭೇಟಿ ನೀಡಿದ್ದರು. ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಹೇಯಕೃತ್ಯ – ಹೆಂಡತಿಯ ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರ
Advertisement
ಈ ವೇಳೆ ಪಕ್ಷದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕ ವಲಯಗಳಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಯಾವುದಕ್ಕೂ ಸಹಕರಿಸುತ್ತಿಲ್ಲ ಎಂಬುವುದನ್ನು ಜಗತ್ತಿಗೆ ತೋರಿಸುವುದರಲ್ಲಿ ಏನಾದರೂ ಇದ್ಯಾ? ಬಾಂಗ್ಲಾದೇಶದ ಗಡಿಯಲ್ಲಿ ಅಕ್ರಮ ನುಸುಳುವಿಕೆಯನ್ನು ಪರಿಶೀಲಿಸುವುದು, ಗಡಿಯನ್ನು ನಿರ್ವಹಿಸುವುದು ಗಡಿ ಭದ್ರತಾ ಪಡೆಯ ಜವಾಬ್ದಾರಿ. ಗಡಿಯನ್ನು ಸುಭದ್ರಗೊಳಿಸುವುದು ಕೇಂದ್ರದ ಕೆಲಸ. ಅಸ್ಸಾಂನಲ್ಲಿ ಒಂದೇ ಪಕ್ಷದ ಸರ್ಕಾರವಿದ್ದರೆ ಮಾತ್ರ ನ್ಯಾಯಯುತವಾಗಿ ಕೆಲಸ ಮಾಡುತ್ತೇವೆ ಎಂಬುವುದರಲ್ಲಿ ಅರ್ಥವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.