ಮಂಗಳೂರು: ಪೌರತ್ವ ಮಸೂದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್ 19ರಂದು ನಡೆದಿದ್ದ ಪ್ರತಿಭಟನೆ ಗೋಲಿಬಾರ್ ವರೆಗೂ ತಿರುಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಮುಸ್ಲಿಂ ಸೆಂಟ್ರಲ್ ಕಮಿಟಿ ಜನವರಿ 4ರಂದು ನೆಹರು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸುವುದಕ್ಕೆ ಮುಂದಾಗಿದೆ.
ಈ ನಡುವೆ ಜನವರಿ 12ರಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಸೂದೆ ಪರವಾಗಿ ಜಾಗೃತಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಆದರೆ ಈ ಎರಡು ಕಾರ್ಯಕ್ರಮಗಳು ನಡೆದರೆ ಮತ್ತೆ ಕಾನೂನು ಸುವ್ಯವಸ್ಥೆ ಹದಗೆಡುತ್ತೆ ಎಂದು ಸ್ವತಃ ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರೇ ಮಂಗಳವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸುವ್ಯವಸ್ಥೆ ಸಭೆ ನಡೆಸಿದರು. ಇದನ್ನೂ ಓದಿ: ಗೋಲಿಬಾರ್‌ನಲ್ಲಿ ಸಾವನ್ನಪ್ಪಿದ ಇಬ್ಬರ ಮೇಲೂ ಎಫ್‍ಐಆರ್ ದಾಖಲು
Advertisement
Advertisement
ಪೊಲೀಸ್ ಅಧಿಕಾರಿಗಳು, ಸರ್ವ ಪಕ್ಷಗಳ ಪ್ರಮುಖರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಂಟು ಶಾಸಕರು, ಸಂಘಟನೆ ಪ್ರಮುಖರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಗೃಹಸಚಿವರು ಕಾರ್ಯಕ್ರಮ ಮುಂದೂಡುವಂತೆ ಎರಡು ಸಂಘಟನೆಗಳಲ್ಲಿ ಮನವಿ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ತೊಂದರೆ ಆಗದಂತೆ ಕಾರ್ಯಕ್ರಮ ಮಾಡುತ್ತೇವೆ ಎಂದು ಎರಡು ಕಡೆಯವರು ಒಪ್ಪಿಕೊಂಡಿದ್ದು, ಕಾನೂನು ಸುವ್ಯವಸ್ಥೆ ಅಡಿಯಲ್ಲಿ ತೀರ್ಮಾನ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಮಂಗ್ಳೂರು ಗಲಭೆಗೆ ಮೊದಲೇ ಪ್ಲಾನ್- ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು
Advertisement
ಇದೇ ಸಂದರ್ಭ ಮಾತನಾಡಿದ ಶಾಸಕ ಯು.ಟಿ ಖಾದರ್, ಜನವರಿ 4ರಂದು ಮುಸ್ಲಿಂ ಸಂಘಟನೆ ಪ್ರತಿಭಟನೆಗೆ ತೀರ್ಮಾನಿಸಿವೆ. ಜನವರಿ 12ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಿಎಎ ಸಮರ್ಥನೆ ಮಾಡುವ ಸಭೆ ನಡೆಯಲಿದೆ. ಎರಡೂ ಕಾರ್ಯಕ್ರಮವನ್ನು ಸಚಿವರು ಪರಿಶೀಲಿಸುತ್ತೇವೆ ಎಂದು ಹೇಳಿದರು.