ಬೆಂಗಳೂರು: ನಟ ಗೋಲ್ಡನ್ ಸ್ಟಾರ್ ಗಣೇಶ್ಗೆ 75 ಲಕ್ಷ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಮೋಕ್ಷ ಅಗರಬತ್ತಿ ಕಂಪನಿಗೆ ಗೆ ಆದೇಶ ನೀಡಿದೆ.
ಮೋಕ್ಷ ಅಗರಬತ್ತಿ ಕಂಪೆನಿ ತನ್ನ ಸಂಸ್ಥೆಯ ಪ್ರಚಾರಕ್ಕೆ ಅನುಮತಿ ಇಲ್ಲದೆ ಗಣೇಶ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಫೋಟೋ ಬಳಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಗೋಲ್ಡನ್ ಸ್ಟಾರ್ ಗಣೇಶ್ 2008 ರಲ್ಲಿ ಮೋಕ್ಷ ಸ್ವರ್ಣ ಚಂಪಾ ಅಗರಬತ್ತಿ ಕಂಪನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ.
Advertisement
ಏನಿದು ಪ್ರಕರಣ?
ಚೆಲುವಿನ ಚಿತ್ತಾರದ ಪ್ರಚಾರದ ಸಲುವಾಗಿ ಮೋಕ್ಷ ಅಗರಬತ್ತಿ ಅಂಡ್ ಕಂಪೆನಿ ತಿಂಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಈ ಅವಧಿ ಮುಗಿದ ಬಳಿಕವೂ ಸಂಸ್ಥೆ ಚಿತ್ರದ ಹೆಸರನ್ನು ಪ್ರಚಾರಕ್ಕೆ ಬಳಸಿತ್ತು. 2008ರಲ್ಲಿ ಒಪ್ಪಿಗೆಯಿಲ್ಲದೆ ಮೋಕ್ಷ ಅಗರಬತ್ತಿ ಅಂಡ್ ಕಂಪೆನಿ ತನ್ನ ಫೋಟೋಗಳನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಚಿತ್ರನಟ ಗಣೇಶ್ ಮೋಕ್ಷ ಅಗರಬತ್ತಿ ಅಂಡ್ ಕಂಪೆನಿ ವಿರುದ್ಧ 75 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು.