DistrictsKarnatakaLatestMain PostRaichur

ರಾಯಚೂರು ನಗರಸಭೆ ಕಲುಷಿತ ನೀರಿಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

ರಾಯಚೂರು: ನಗರಸಭೆ ಕಲುಷಿತ ನೀರಿಗೆ ಮಂಗಳವಾರ ಮತ್ತೊಂದು ಬಲಿಯಾಗಿದೆ. ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ನಗರದ ಮಂಗಳವಾರ ಪೇಟೆ ವಾರ್ಡ್ ಸಂಖ್ಯೆ 12ರ ನಿವಾಸಿ ನಯಿಮುದ್ದೀನ್(55) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

ವಾಂತಿ ಭೇದಿಯಿಂದ ಖಾಸಗಿ ಆಸ್ಪತ್ರೆಯಲ್ಲಿ 10 ದಿನಗಳಿಂದ ನಯಿಮುದ್ದೀನ್ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದ ನಯಿಮುದ್ದೀನ್ ಜೂನ್ 7 ರಂದು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತೆ: ಆರಗ ಜ್ಞಾನೇಂದ್ರ

ಈ ಸಾವಿನ ಮೂಲಕ ನಗರದಲ್ಲಿ ಕಲುಷಿತ ನೀರಿನಿಂದಾಗಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ನಯಿಮುದ್ದೀನ್ ಮನೆಗೆ ಆಧಾರವಾಗಿದ್ದರು. ಇದೀಗ ಅವರನ್ನು ಕಳೆದುಕೊಂಡಿರುವ ಕುಟುಂಬ ಕಂಗಾಲಾಗಿದೆ.

Leave a Reply

Your email address will not be published.

Back to top button