ಬೆಂಗಳೂರು: ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್‌ನಲ್ಲಿ ಅಕ್ರಮ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ನೀಡಿದರು.
ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಎಸ್ ಸಿ ಮೋರ್ಚಾಗಳ ಪದಾಧಿಕಾರಿಗಳ ಜೊತೆ ಸಂವಾದ ಸಭೆ ನಡೆಸಿದ ಅವರು, ಡಿಕೆಶಿ ಜೈಲಿಗೆ ಹೋಗಿದ್ದು ಬಿಜೆಪಿಗೆ ಬಂದಿಲ್ಲ ಎಂದಲ್ಲ. ಬದಲಿಗೆ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್, ಎಫ್‌ಐಆರ್ ಹಾಕಲಾಗಿದೆ. ಇದರಿಂದಾಗಿ ಜೈಲಿಗೆ ಹೋಗಿದ್ದಾರೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.
Advertisement
Advertisement
ಕೇಸ್‌ನಿಂದ ಬಚಾವಾಗುವ ಅವಕಾಶ ಇದ್ದಿದ್ದರೆ ಡಿಕೆಶಿ ಮೊದಲೇ ಬಂದು ಬಿಜೆಪಿಗೆ ಸೇರುತ್ತಿದ್ದರು. ಆದರೆ ಕಾಂಗ್ರೆಸ್‌ನಲ್ಲಿ ಅಂತರ್ಯುದ್ಧ ನಡೆಯತ್ತಿದೆ. ಆಂತರಿಕ ಗೊಂದಲದಿಂದ ಪಾರಾಗಲು, ಕೇಸ್ ಮರೆ ಮಾಚಲು ಇಂತಹ ಹೇಳಿಕೆಯನ್ನು ನೀಡಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿಗೆ ಸೇರಿಲ್ಲ ಅಂತ ನನ್ನ ತಿಹಾರ್ ಜೈಲಿಗೆ ಕಳುಹಿಸಿದ್ರು: ಡಿ.ಕೆ ಶಿವಕುಮಾರ್
Advertisement
Advertisement
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತದೆ. ಬಿಜೆಪಿಗೆ ಕಾಂಗ್ರೆಸ್ ಏಳು ದಶಕಗಳಿಂದಲೂ ವಿರೋಧ ಪಕ್ಷವಾಗಿದೆ. ಇದರಿಂದಾಗಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದಾರೆ. ಜೆಡಿಎಸ್ ಬೆಂಬಲ ಬಗ್ಗೆ ನಾನು ಮಾತಾಡಲ್ಲ. ರಾಜಕೀಯದಲ್ಲಿ ಶತ್ರುಗಳು ಅಂತ ಯಾರೂ ಇಲ್ಲ. ಆದರೆ ರಾಜಕೀಯ ವಿರೋಧಿಗಳು ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಚಿಕಿತ್ಸೆ ನೆಪದಲ್ಲಿ ರೋಗಿಗೆ ಲೈಂಗಿಕ ಕಿರುಕುಳ – ಸರ್ಕಾರಿ ವೈದ್ಯನ ಅಮಾನತು
ಬದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್‌ನ ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿಯಿಂದಲೇ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಸಿದ್ದರಾಮಯ್ಯರನ್ನು ಪ್ರಶ್ನಾತೀತ ನಾಯಕರೆಂದು ಕರೆಯಲಾಗುತ್ತಿತ್ತು. ಅಷ್ಟೇ ಅಲ್ಲದೇ ಭವಿಷ್ಯದ ಪಿಎಂ ಎನ್ನಲಾಗುತ್ತಿತ್ತು. ಆದರೆ ಈಗ ಎಂಥ ದುರವಸ್ಥೆ ಬಂದಿದೆ ಎಂದರೆ ಸಿದ್ದರಾಮಯ್ಯಗೆ ಸರಿಯಾದ ನೆಲೆ ದೊರೆಯುತ್ತಿಲ್ಲ. ಕಾಂಗ್ರೆಸ್‌ನಲ್ಲಿ ದೊಡ್ಡ ವರ್ಗ ಸಿದ್ದರಾಮಯ್ಯ ವಿರುದ್ಧ ಕುದಿಯುತ್ತಿದೆ. ಸಿದ್ದರಾಮಯ್ಯಗೆ ಈ ಸ್ಥಿತಿ ಬರಬಾರದಾಗಿತ್ತು ಎಂದು ಹೇಳಿದ ಸಿಟಿ ರವಿ ಸಿದ್ದರಾಮಯ್ಯರ ಕಾಲೆಳೆದರು. ಇದನ್ನೂ ಓದಿ: ಚಿಕಿತ್ಸೆ ನೆಪದಲ್ಲಿ ರೋಗಿಗೆ ಲೈಂಗಿಕ ಕಿರುಕುಳ – ಸರ್ಕಾರಿ ವೈದ್ಯನ ಅಮಾನತು