ತಿರುವನಂತಪುರಂ: ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ತಿಳಿದು ಆಕೆಯ ದೇಹವನ್ನು ಮುಟ್ಟುತ್ತಾನೆ ಎಂಬುದು ನಂಬಲಾಗದ ಸಂಗತಿ ಎಂದು ಕೋಯಿಕ್ಕೋಡ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಹೇಳಿದೆ.
ಬರಹಗಾರ, ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್ ಅವರ ಮೇಲೆ 30 ವರ್ಷ ವಯಸ್ಸಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಐಪಿಸಿ ಸೆಕ್ಷನ್ 354ಎ (ಒತ್ತಾಯಪೂರ್ವಕ ಲೈಂಗಿಕ ದೌರ್ಜನ್ಯ) ಅಡಿ ಆರೋಪಿಯ ಅಪರಾಧವು ಮೇಲ್ನೋಟಕ್ಕೆ ಸಾಬೀತಾಗಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿ ವಜಾ – ಅತ್ಯಾಚಾರ ಪ್ರಕರಣ ದಾಖಲಿಸಲು ಹೈಕೋರ್ಟ್ ಸೂಚನೆ
Advertisement
Advertisement
ಸಂತ್ರಸ್ತೆಯು ಎಸ್‌ಸಿ/ಎಸ್‌ಟಿಗೆ ಸೇರಿದವಳು ಎಂಬ ಅರಿವಿದ್ದೇ ಹೀಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕೋರ್ಟ್ ತಿಳಿಸಿದೆ.
Advertisement
74 ವಯಸ್ಸಿನ ವ್ಯಕ್ತಿ ಲೈಂಗಿಕ ಕಿರುಕುಳ ನೀಡುವಷ್ಟು ಸಮರ್ಥರಾಗಿರುವುದಿಲ್ಲ. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿರುವ ವ್ಯಕ್ತಿ ವಿರುದ್ಧ ದೂರು ನೀಡಿದ್ದು ದುರಾದೃಷ್ಟಕರ ಎಂದು ನಿನ್ನೆ ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ – ಪ್ರತಿಪಕ್ಷಗಳ ಆಕ್ರೋಶ
Advertisement
ಇದು ಚಂದ್ರನ್ ಅವರ ವಿರುದ್ಧದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ. ದಲಿತ ಲೇಖಕಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಅವರು 2022ರ ಏಪ್ರಿಲ್‌ನಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.