ನವದೆಹಲಿ: ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿ ಮಾಡುವ ಬಗ್ಗೆ ನಾವು ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ.
ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮುಂದೆ ವಿಷಯ ಪ್ರಸ್ತಾಪಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಇವುಗಳ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರತದಲ್ಲಿದ್ದ ಮೂರರ ಪೈಕಿ ಎರಡು ಟ್ವಿಟ್ಟರ್ ಕಚೇರಿ ಬಂದ್!
Advertisement
Advertisement
ಮಾರ್ಚ್ 2020 ರಲ್ಲಿ ಸುಪ್ರೀಂಕೋರ್ಟ್ (Supreme Court) ನ 5 ನ್ಯಾಯಾಧೀಶರ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸಿದ್ದರು. ಅರ್ಜಿದಾರರು ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಸಾಂವಿಧಾನಿಕ ಪೀಠ ನಿರಾಕರಿಸಿತ್ತು.
Advertisement
370 ನೇ ವಿಧಿಯ ವ್ಯಾಖ್ಯಾನದೊಂದಿಗೆ ವ್ಯವಹರಿಸಿದ ಅರ್ಜಿದಾರರು ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ಎರಡು ತೀರ್ಪುಗಳು ಸಂಘರ್ಷದಲ್ಲಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 5 ನ್ಯಾಯಾಧೀಶರ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು, ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪೀಠ ಹೇಳಿತ್ತು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k