ನವದೆಹಲಿ: ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ (CJI Gavai) ಅವರ ಮೇಲೆ ಶೂ ಎಸೆಯಲು ಮುಂದಾದ ವಕೀಲ ರಾಕೇಶ್ ಕಿಶೋರ್ (Rakesh Kishore) ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು (Jail) ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ತಿಳಿಸಿದರು.
#WATCH | Delhi: Suspended Advocate Rakesh Kishore, who attempted to hurl an object at CJI BR Gavai, says, “…I was hurt…I was not inebriated, this was my reaction to his action…I am not fearful. I don’t regret what happened.”
“A PIL was filed in the Court of CJI on 16th… pic.twitter.com/6h4S47NxMd
— ANI (@ANI) October 7, 2025
ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‌ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ
ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಕಿಶೋರ್, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಸುಪ್ರೀಂ ಸಿಜೆಐ ಮೇಲೆ ಶೂ ಎಸೆದ ವಕೀಲ – ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ; ಮೋದಿ ತೀವ್ರ ಖಂಡನೆ
ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಹೇಳಿದ್ದಾರೆ.