ನವದೆಹಲಿ: ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎನ್.ವಿ.ರಮಣ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಎನ್.ವಿ.ರಮಣ ಅವರು 2022ರ ಆಗಸ್ಟ್ 26 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ನ್ಯಾ.ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ರಮಣ ಅವರು ಭಾರತದ 48ನೇ ಮತ್ತು ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಲಲಿತ್ ಅವರು 49ನೇ ಸಿಜೆಐ ಆಗಲಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಭಾರತದ ಮೇಲೆ ಉಗ್ರರ ದಾಳಿ ಭೀತಿ: ಗುಪ್ತಚರ ಇಲಾಖೆ ಎಚ್ಚರಿಕೆ
Advertisement
Chief Justice of India NV Ramana today recommends Justice UU Lalit's name as his successor. Justice Lalit to become the 49th CJI. Chief Justice Ramana is retiring this month. pic.twitter.com/AfJJc8652V
— ANI (@ANI) August 4, 2022
Advertisement
ಉದಯ್ ಉಮೇಶ್ ಲಲಿತ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು. ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರಾಗಿದ್ದರು. ನ್ಯಾಯಮೂರ್ತಿ ಲಲಿತ್ ಅವರು ನೇರವಾಗಿ ಸುಪ್ರೀಂ ಕೋರ್ಟ್ಗೆ ಏರಿದ 6ನೇ ಹಿರಿಯ ವಕೀಲರಾಗಿದ್ದಾರೆ.
Advertisement
Advertisement
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (CJI) ಆಗುವ ಹಾದಿಯಲ್ಲಿರುವ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ‘ತ್ರಿವಳಿ ತಲಾಖ್’ ರದ್ದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ. ಇದನ್ನೂ ಓದಿ: ಕಾಮನ್ವೆಲ್ತ್ನಲ್ಲಿ ಭಾರತದ ಕಮಾಲ್- ಸ್ಕ್ವಾಷ್ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್