ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಕ್ಕೆ ಸಿಆರ್‌ಪಿಎಫ್ ಯೋಧರ ಭದ್ರತೆ, 25 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಅಪಘಾತದ ಕುರಿತ ತನಿಖೆಯನ್ನು 7 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಯ್‍ಬರೇಲಿಯಲ್ಲಿ ನಡೆದ ಸಂತ್ರಸ್ತೆಯ ಅಪಘಾತ ಪ್ರಕರಣ ಸೇರಿದಂತೆ ಉನ್ನಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದೂ ಪ್ರಕರಣಗಳನ್ನು ದೆಹಲಿಯ ಸಿಬಿಐಗೆ ವರ್ಗಾಯಿಸಬೇಕು. ಇದರೊಂದಿಗೆ ರಾಯ್‍ಬರೇಲಿಯಲ್ಲಿ ನಡೆದ ಅಪಘಾತ ಪ್ರಕರಣದ ತನಿಖೆಯನ್ನು ಬುಧವಾರದಿಂದ ಕೇವಲ 7 ದಿನಗಳ ಒಳಗಡೆ ಪೂರ್ಣಗೊಳಿಸುವಂತೆ ಸಿಬಿಐಗೆ ಸೂಚಿಸಿದೆ.
Advertisement
Supreme Court transfers trial of all the cases related to #Unnao rape incident from Uttar Pradesh to Delhi pic.twitter.com/tOKpOfJRMS
— DD News (@DDNewslive) August 1, 2019
Advertisement
ಪ್ರತಿ ದಿನ ವಿಚಾರಣೆ ನಡೆಸಿ 45 ದಿನಗಳೊಳಗೆ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದೆ. 25 ಲಕ್ಷ ರೂ. ಪರಿಹಾರದ ಜೊತೆಗೆ ಸಂತ್ರಸ್ತೆಯ ಕುಟುಂಬ ಬಯಸಿದರೆ, ಅಪಘಾತದಲ್ಲಿ ಬದುಕುಳಿದವರನ್ನು ಲಕ್ನೋ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸಾ ಸೌಲಭ್ಯ ಹೊಂದಿರುವ ದೇಶದ ಯಾವುದೇ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
Advertisement
ಸಂತ್ರಸ್ತೆಯ ತಾಯಿ, ಒಡಹುಟ್ಟಿದವರು, ಚಿಕ್ಕಪ್ಪ ಮಹೇಶ್ ಸಿಂಗ್ ಸೇರಿದಂತೆ ಅವರ ಹತ್ತಿರದ ಸಂಬಂಧಿ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ವಕೀಲರಿಗೆ ಸಿಆರ್‌ಪಿಎಫ್ ಯೋಧರ ಭದ್ರತೆ ನೀಡಬೇಕು. ಭದ್ರತೆಯ ಕುರಿತ ಆದೇಶವನ್ನು ಪಾಲಿಸಿರುವ ಕುರಿತು ನಾಳೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ತಿಳಿಸಿದೆ. ವಿಚಾರಣೆ ತಡವಾಗಿರುವ ಕುರಿತು ಸೂಕ್ತ ಕಾರಣ ತಿಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
Advertisement
Grateful to the SC for taking cognisance of the ‘Jungle Raj’ being unleashed in U.P.
Meanwhile, the BJP finally acknowledges having empowered a criminal and takes some action to correct itself and move in the direction of justice for a young woman who has suffered immeasurably. pic.twitter.com/nNNWhW1CKz
— Priyanka Gandhi Vadra (@priyankagandhi) August 1, 2019
ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರು ವಕೀಲರೊಂದಿಗೆ ರಾಯ್‍ಬರೇಲಿ ಜೈಲಿನಲ್ಲಿರುವ ಸಂಬಂಧಿಕರೊಬ್ಬರನ್ನು ನೋಡಲು ತೆರಳುತ್ತಿದ್ದರು. ಈ ವೇಳೆ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಅಲ್ಲದೆ, ಸಂತ್ರಸ್ತೆ ಹಾಗೂ ವಕೀಲರು ತೀವ್ರ ಗಾಯಗೊಂಡಿದ್ದರು.
ಮಳೆ ಹೆಚ್ಚು ಬರುತ್ತಿದ್ದರಿಂದ ಎರಡೂ ವಾಹನಗಳ ನಿಯಂತ್ರಣ ತಪ್ಪಿ ಅಪಘಾತ ಸಂಭವಿದೆ ಎಂದು ಉನ್ನಾವ್ ಪೊಲೀಸ್ ವರಿಷ್ಠಾಧಿಕಾರಿ ಮಾಧವ್ ಪ್ರಸಾದ್ ವರ್ಮಾ ತಿಳಿಸಿದ್ದರು. ಸಂತ್ರಸ್ತೆಯು ಉನ್ನಾವ್‍ನ ನಿವಾಸಿಯಾಗಿದ್ದು, ಬ್ಯಾಂಗರ್ಮೌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕುಲ್‍ದೀಪ್ ಸೆಂಗರ್ 2017ರಲ್ಲಿ ಮಗಳನ್ನು ಅತ್ಯಾಚಾರ ಗೈದಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದರು. ಆದರೆ ಈ ಬಗ್ಗೆ ಯಾರು ಕೂಡ ಕ್ರಮ ತೆಗೆದುಕೊಂಡಿರಲಿಲ್ಲ. ಬಳಿಕ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು.
#Unnao rape case: Chief Justice of India, Ranjan Gogoi asks Solicitor General Tushar Mehta, 'How much time do you need (for investigating the accident of Unnao rape survivor & others)?' Solicitor General says, 'A month'. CJI replies 'A month? No, investigate in 7 days.' pic.twitter.com/LDscWFpC6d
— ANI (@ANI) August 1, 2019
ಅಪಘಾತದ ನಂತರ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿಗಳೇ ಈ ಅಪಘಾತ ಮಾಡಿಸಿರಬಹುದು ಎಂದು ದೂರಿದ್ದರು. ಕಳೆದ ಎರಡು ದಿನಗಳಿಂದ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಯುಪಿಯಲ್ಲಿ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಯಾನ ನಡೆಸಲಾಗುತ್ತಿದೆ. ಇಂದು ಶಾಸಕ ಕುಲ್‍ದೀಪ್ ಸೆಂಗರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ.
Beti Bachao-Beti Padhao
A new special education bulletin for Indian women. Don’t ask questions if a BJP MLA is accused of having raped you.https://t.co/8ObmmFBl0L
— Rahul Gandhi (@RahulGandhi) July 29, 2019