ನವದೆಹಲಿ: ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೋಯ್ ಅವರು ತನ್ನ ನಂತರ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಾಧೀಶ ಎಸ್.ಎ ಬೊಬ್ಡೆ ಅವರನ್ನು ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ರಂಜನ್ ಗೊಗೋಯ್ ಅವರು ನವೆಂಬರ್ 17 ರಂದು ಮುಖ್ಯ ನ್ಯಾಯಾಧೀಶರ ಸ್ಥಾನದಿಂದ ನಿವೃತ್ತಿ ಹೊಂದಲಿದ್ದು, ತನ್ನ ನಂತರ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿ ಎಸ್.ಎ ಬೊಬ್ಡೆ ಅವರನ್ನು ನೇಮಕ ಮಾಡಿ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಅಕ್ಟೋಬರ್ 3, 2018 ರಂದು ಭಾರತದ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಮುಂದಿನ ತಿಂಗಳು ಅಂದರೆ ನವೆಂಬರ್ 17 ರಂದು ನಿವೃತ್ತಿ ಆಗಲಿದ್ದಾರೆ.
Advertisement
ಈ ಹಿಂದಿಯಿಂದಲೂ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರು ನಿವೃತ್ತಿ ಆಗುವ ಸಮಯದಲ್ಲಿ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶರನ್ನು ತಮ್ಮ ಮುಂದಿನ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡುವುದು ಸಂಪ್ರದಾಯವಾಗಿದೆ. ಅದ್ದರಿಂದ ರಂಜನ್ ಗೊಗೋಯ್ ಅವರು ಹಿರಿಯ ನ್ಯಾಯಾಧೀಶರಾದ ಎಸ್.ಎ ಬೊಬ್ಡೆ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಸೂಚಿಸಿದ್ದಾರೆ .
Advertisement
ನ್ಯಾಯಮೂರ್ತಿ ಎಸ್‍ಎ ಬೊಬ್ಡೆ ಅವರು ಮಧ್ಯಪ್ರದೇಶದ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದವರು. ಮಹಾರಾಷ್ಟ್ರದ ನಾಗ್ಪುರದಲ್ಲಿ ಏಪ್ರಿಲ್ 24, 1956 ರಂದು ಜನಿಸಿದ ನ್ಯಾಯಮೂರ್ತಿ ಬೊಬ್ಡೆ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಹೆಚ್ಚುವರಿ ನ್ಯಾಯಾಧೀಶರಾಗಿ 2000ರಲ್ಲಿ ಬಾಂಬೆ ಹೈಕೋರ್ಟಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. 2012 ರಲ್ಲಿ ಅವರು ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ನಂತರ ಅವರನ್ನು 2013 ರ ಏಪ್ರಿಲ್‍ನಲ್ಲಿ ಸುಪ್ರೀಂ ಕೋರ್ಟ್‍ಗೆ ನ್ಯಾಯಾಧೀಶರಾಗಿ ನೇಮಕ ಮಾಡಲಾಯಿತು. ಬೊಬ್ಡೆ ಅವರು 2021ರ ಏಪ್ರಿಲ್ 23 ರಂದು ನಿವೃತ್ತರಾಗಲಿದ್ದಾರೆ.