ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ (Sanjiv Khanna) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಬಿ.ಆರ್ ಗವಾಯಿ (BR Gavai) ಅವರ ಹೆಸರು ಶಿಫಾರಸು ಮಾಡಿದ್ದಾರೆ.
ಮುಂದಿನ ತಿಂಗಳು ಮೇ 13ರಂದು ಸಿಜೆಐ ಹುದ್ದೆಯಿಂದ ಸಂಜೀವ್ ಖನ್ನಾ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಬಿ.ಆರ್ ಗವಾಯಿ ಅವರ ಹೆಸರನ್ನ ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಬಿ.ಆರ್ ಗವಾರಿ ಅವರು ಮೇ 14ರಂದು 52ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ
ಕಳೆದ ವರ್ಷ ನವೆಂಬರ್ 10ರಂದು ಡಿ.ವೈ ಚಂದ್ರಚೂಡ್ ಅವರು ಸಿಜೆಐ ಸ್ಥಾನದಿಂದ ನಿವೃತ್ತರಾದರು. ಆ ಬಳಿಕ ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸದ್ಯ ಅವರು ಮೇ 13ರಂದು ನಿವೃತ್ತಿ ಹೊಂದಿದ ಬಳಿಕ ಮೇ 14ರಂದು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಬಿ.ಆರ್ ಗವಾಯಿ ಅವರು 2025ರ ನವೆಂಬರ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!
2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?
ಭೂಷಣ್ ರಾಮಕೃಷ್ಣ ಗವಾಯಿ ಯಾರು?
2007ರಲ್ಲಿ ನ್ಯಾ. ಕೆ.ಜಿ ಬಾಲಕೃಷ್ಣನ್ ಅವರ ಬಳಿಕ ನ್ಯಾಯಮೂರ್ತಿ ಸ್ಥಾನ ಅಲಂಕರಿದ 2ನೇ ದಲಿತರೂ ಪ್ರಮುಖರಾಗಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಮೂಲದ ಗವಾಯಿ ಅವರು 1985 ರಲ್ಲಿ ಬ್ಯಾರಿಸ್ಟರ್ ರಾಜಾ ಭೋನ್ಸಾಲೆ ಅವರ ಬಳಿ ತಮ್ಮ ವಕೀಲ ವೃತ್ತಿ ಪ್ರಾರಂಭಿಸಿದರು. ಬಳಿಕ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರವಾಗಿ ಅಭ್ಯಾಸ ಶುರು ಮಾಡಿದರು. 1992 ರಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನೇಮಕಗೊಂಡ ಇವರು 2000 ಇಸವಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆದರು. ನಂತರ 2003ರಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ವೃತ್ತಿ ಜೀವನ ಪ್ರಾರಂಭವಾಯಿತು. 2005ರಲ್ಲಿ ಖಾಯಂ ನ್ಯಾಯಾಧೀಶರಾದರು. 2019 ರಲ್ಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿಹೊಂದಿದರು.
ಗವಾಯಿ ಅವರು ಅಮರಾವತಿಯ ಡಾ. ಅಂಬೇಡ್ಕರ್ ಕಾಲೇಜ್ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದರು. ತಮ್ಮ ಶಿಕ್ಷಣದ ಜೊತೆಗೆ, ಕಾನೂನು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ವೃತ್ತಿಜೀವನದ ಗಮನಾರ್ಹ ತೀರ್ಪುಗಳಲ್ಲಿ ಒಂದು ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದು. ಅವರು ನವೆಂಬರ್‌ನಲ್ಲಿ ನಿವೃತ್ತರಾಗುವ ಮೊದಲು ಸುಮಾರು ಆರು ತಿಂಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.