ನವದೆಹಲಿ: ನೀಟ್ ಪರೀಕ್ಷೆ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ (NEET Scam) ಹಗರಣವನ್ನು ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ನಡುವೆ, ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ(Abhijit Deepke) ಅವರಿಗೆ ಟೈಫಾಯ್ಡ್(Typhoid) ಇರುವುದು ದೃಢಪಟ್ಟಿದೆ. ಆದರೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾ ಎಕ್ಸ್ (X) ನಲ್ಲಿ ವೀಡಿಯೋ ಹಂಚಿಕೊಂಡಿರುವ ಅಭೀಜಿತ್ ದೀಪ್ಕೆ, ತಮ್ಮ ಆರೋಗ್ಯ ಸಮಸ್ಯೆ ಪ್ರತಿಭಟನೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ. ದೇಶದಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ವಿಡಿಯೋದಲ್ಲಿ ಮಾತನಾಡಿ, ನನಗೆ ಟೈಫಾಯ್ಡ್ ಇರುವುದು ದೃಢಪಟ್ಟಿದೆ. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಈ ಚಳವಳಿಯನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ.ಇದನ್ನೂ ಓದಿ; CJP Protest Live Updates | ಹೆಚ್ಚಿದ ಪ್ರತಿಭಟನೆ ಕಿಚ್ಚು – ಪ್ರಧಾನ್ ರಾಜೀನಾಮೆಗೆ ʻಕಾಕ್ರೋಚ್ʼ ಬಿಗಿ ಪಟ್ಟು
ಇದೇ ವೇಳೆ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿರುವುದಕ್ಕೆ ಅಭೀಜಿತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸೋನಮ್ ವಾಂಗ್ಚುಕ್ ಸರ್ ಉಪವಾಸ ಹಿಂಪಡೆದಿರುವುದು ಸಮಾಧಾನ ತಂದಿದೆ. ಆದರೆ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಣೆಗಾರಿಕೆ ನಿಗದಿಯಾಗಬೇಕು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಹೇಳುವ ಮೂಲಕ ತಮ್ಮ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ; ಜಂತರ್ ಮಂತರ್‌ಗೆ ಊಟ ತಲುಪದಂತೆ ದೆಹಲಿ ಪೊಲೀಸರಿಂದ ತಡೆ – ಸಿಜೆಪಿಯಿಂದ ಗಂಭೀರ ಆರೋಪ
