ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗೆ ಜಮಾಯಿಸಿರುವ CJP ಕಾರ್ಯಕರ್ತರು ಕನ್ನಾಟ್ ಪ್ಲೇಸ್ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(CJP) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಶನಿವಾರ ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ರಾತ್ರೋರಾತ್ರಿ ಕನಿಷ್ಠ 1,000 ಜನರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ರಾತ್ರೋರಾತ್ರಿ 1,000ಕ್ಕೂ ಹೆಚ್ಚು ಜನ ವಶಕ್ಕೆ
ಶನಿವಾರ ಮಧ್ಯರಾತ್ರಿ 12:30ರ ಸುಮಾರಿಗೆ ವಶಕ್ಕೆ ಪಡೆಯಲಾದವರ ಪೈಕಿ ಸುಮಾರು 250 ಮಂದಿ ದೆಹಲಿಯ ಆಗ್ನೇಯ (ಸೌತ್ ಈಸ್ಟ್) ಜಿಲ್ಲೆಗೆ ಸೇರಿದವರಾಗಿದ್ದಾರೆ. ವಿಶೇಷವಾಗಿ 2020ರ ಸಿಎಎ ವಿರೋಧಿ ಪ್ರತಿಭಟನೆಯ(CAA Protest) ಕೇಂದ್ರಬಿಂದುವಾಗಿದ್ದ ಶಾಹೀನ್ ಬಾಗ್ ಸುತ್ತಮುತ್ತಲಿನ ಪ್ರದೇಶಗಳಿಂದ ಈ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನುಳಿದಂತೆ ಉತ್ತರ ಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಶಹದಾರಾ ಹಾಗೂ ಪೂರ್ವ ದೆಹಲಿ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.
ಪ್ರತಿಭಟನೆ ನಿಯಂತ್ರಿಸಲು ವಿಮಾನದಲ್ಲೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಸೌರವ್ ದಾಸ್ ಅವರನ್ನು ವಶಕ್ಕೆ ಪಡೆಯಲಾಗಿದೆ ಮೂವರನ್ನು ಪ್ರತ್ಯೇಕ ಕೇಂದ್ರಗಳಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಹೈ ಅಲರ್ಟ್- 45 ಮೆಟ್ರೋ ನಿಲ್ದಾಣಗಳು ಬಂದ್, ಜಂತರ್ ಮಂತರ್ನಲ್ಲಿ 7 ಹಂತದ ಬ್ಯಾರಿಕೇಡ್

