ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು (Fast-Track Courts) ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೀಡಿರುವ ಭರವಸೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ತಿರಸ್ಕರಿಸಿದೆ.
ಪ್ರಧಾನಿ ಪೋಸ್ಟ್ ಪ್ರಕಟವಾದ ಬೆನ್ನಲ್ಲೇ ಸಿಜೆಪಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂಬ ತನ್ನ ಪ್ರಮುಖ ಬೇಡಿಕೆಯನ್ನು ಪುನರುಚ್ಚರಿಸಿದೆ.
Dharmendra Pradhan Must Resign
धर्मेंद्र प्रधान को इस्तीफ़ा देना होगा https://t.co/0XShqJ6FVG
— Cockroach is Back (@Cockroachisback) July 23, 2026
ಸರ್ಕಾರದ ನಿರ್ಧಾರಗಳಿಗೆ ತೃಪ್ತರಾಗದ ಸಿಜೆಪಿ, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ಪ್ರಧಾನ್(Dharmendra Pradhan) ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆಗ್ರಹಿಸಿದೆ. ಇದನ್ನೂ ಓದಿ: ಕರ್ನಾಟಕದ ಉದಾಹರಣೆ ನೀಡಿ ಕಾಂಗ್ರೆಸ್, INDIA ಕೂಟದ ಆಡಳಿತದಲ್ಲೇ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆ: ಅಮಿತ್ ಮಾಳವೀಯ ತಿರುಗೇಟು
