ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ (Cockroach Janta Party) ವಕ್ತಾರ ವಿಜೇತಾ ದಹಿಯಾ (Vijeta Dahiya) ಅವರನ್ನು ಸ್ಥಾನದಿಂದ ವಜಾಗೊಳಿಸಲಾಗಿದೆ.
ಸಂಸತ್ತಿಗೆ ಸಿಜೆಪಿ ಪ್ರತಿಭಟನಾ ಮೆರವಣಿಗೆ ಹೊರಡುತ್ತಿದ್ದ ಸಂದರ್ಭದಲ್ಲಿ ವಕ್ತಾರ ವಿಜೇತಾ ದಹಿಯಾ ಅವರು ಬರ್ಗರ್ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಅವರನ್ನು ಪಕ್ಷ ತೆಗೆದುಹಾಕಿದೆ. ಇದನ್ನೂ ಓದಿ: ಪ್ರಧಾನಿ ನಿವಾಸದ ಎದುರು ರಾಹುಲ್, ಪ್ರಿಯಾಂಕಾ ಧರಣಿ – ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು
ದಹಿಯಾ ಅವರ ಸಂವೇದನಾಶೀಲವಲ್ಲದ ನಡೆಯನ್ನು ಸಿಜೆಪಿ ಬಲವಾಗಿ ಖಂಡಿಸುತ್ತದೆ. ಇಂತಹ ನಡವಳಿಕೆ ಸ್ವೀಕಾರಾರ್ಹವಲ್ಲ. ನಮ್ಮ ಚಳವಳಿಯ ಮೌಲ್ಯಗಳು ಮತ್ತು ತತ್ವಗಳಿಗೆ ಇದು ವಿರುದ್ಧವಾಗಿದೆ ಎಂದು ಸಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.
ಸಿಜೆಪಿ ಪ್ರತಿಭಟನಾಕಾರರು, ಯುವ ವಿದ್ಯಾರ್ಥಿಗಳು, ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸಿ ಪೊಲೀಸರಿಂದ ಲಾಠಿ ಪ್ರಹಾರಕ್ಕೆ ಒಳಗಾದ ಸಂದರ್ಭದಲ್ಲಿ, ದಹಿಯಾ ಬರ್ಗರ್ ತಿನ್ನುವುದನ್ನು ತೋರಿಸಿದ ಕ್ಲಿಪ್‌ಗಳ ಆನ್‌ಲೈನ್‌ನಲ್ಲಿ ಟೀಕೆಗೆ ಗುರಿಯಾಗಿದ್ದವು. ಇದನ್ನೂ ಓದಿ: ‘ಮಕ್ಕಳನ್ನ ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ’ – ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮೋದಿ ಮಹತ್ವದ ಸಂದೇಶ
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರಮುಖ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರನ್ನು ಚದುರಿಸಲು ದೆಹಲಿ ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದರು. ಪರಿಣಾಮ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.
