ನವದೆಹಲಿ: ಇಂದು (NEET Scam) ಕೇಂದ್ರ ಸರ್ಕಾರದೊಂದಿಗೆ 3ನೇ ಸುತ್ತಿನ ಸಭೆ ನಡೆಸುವುದಕ್ಕೆ ಮುನ್ನ ಕಾಕ್ರೋಚ್ ಜನತಾ ಪಕ್ಷದ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮತ್ತೆ ಕಟ್ಟುನಿಟ್ಟಿನ ಎಚ್ಚರಿಕೆ ರವಾನಿಸಿದ್ದಾರೆ.
ಸಭೆಗೂ ಮುನ್ನ ಮಾತನಾಡಿದ ಅವರು, ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡದಿದ್ದರೆ ಈ ರೀತಿಯ ಸಭೆಗಳಿಗೆ ಯಾವುದೇ ಅರ್ಥವಿಲ್ಲ. ಸರ್ಕಾರ ಇದೇ ಧೋರಣೆ ಮುಂದುವರಿಸಿದರೆ ನಾವು ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಯ 47 ಅಧಿಕಾರಿಗಳನ್ನು ವಜಾಗೊಳಿಸಿರುವುದಷ್ಟೇ ಸಾಕಾಗುವುದಿಲ್ಲ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಸಂಪೂರ್ಣ ಹೊಣೆ ಶಿಕ್ಷಣ ಸಚಿವರ ಮೇಲಿದೆ ಎಂದು ಆರೋಪಿಸಿದರು.ಇದನ್ನೂ ಓದಿ: ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಅದರ ನಂತರ ನಡೆದ ಘಟನೆಗಳಿಗೆ ಧರ್ಮೇಂದ್ರ ಪ್ರಧಾನ್ ನೇರ ಹೊಣೆಗಾರರು. ಅವರು ರಾಜೀನಾಮೆ ನೀಡಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗಾಗಿ ನಾವು ಸರ್ಕಾರಕ್ಕೆ ಬೇಡಿಕೆಗಳ ಪಟ್ಟಿಯನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.
ಇದರ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ(J P Nadda) ಸಿಜೆಪಿ ಸದಸ್ಯರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಮೂರು ಪ್ರಮುಖ ಬೇಡಿಕೆಗಳು ಮತ್ತು ಐದು ಸುಧಾರಣಾ ಸಲಹೆಗಳು ಮಂಡನೆಯಾಗಿವೆ ಎಂದು ಅವರು ಹೇಳಿದ್ದಾರೆ. ಸರ್ಕಾರದೊಂದಿಗೆ ನಡೆದ ಚರ್ಚೆಯ ವಿವರಗಳನ್ನು ತಿಳಿಸಲು ಶನಿವಾರ ಮತ್ತೆ ಸಿಜೆಪಿ ಸದಸ್ಯರನ್ನು ಭೇಟಿಯಾಗುತ್ತೇವೆ ಎಂದು ಜೆ.ಪಿ. ನಡ್ಡಾ ತಿಳಿಸಿದ್ದಾರೆ.ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಹತ್ಯೆ – ಲಿವ್ ಇನ್ ಪ್ರಿಯಕರ ಅರೆಸ್ಟ್
