ಬೆಂಗಳೂರು: ಕುಡಚಿ ಕಾಂಗ್ರೆಸ್ ಶಾಸಕರ ಮಹೇಂದ್ರ ತಮ್ಮಣ್ಣನವರ್ ತಮ್ಮ ಮಗನಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ನಾಮಕರಣ ಮಾಡಿಸಿದರು. ಮಗನಿಗೂ ʻಶಿವಕುಮಾರ್ʼ ಅಂತಲೇ ನಾಮಕರಣ ಮಾಡಿಸಿದ್ರು.
ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!
ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ,… pic.twitter.com/vCshPwiugG
— DK Shivakumar (@DKShivakumar) October 31, 2025
ಈ ಬಗ್ಗೆ ಡಿಕೆ ಶಿವಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ʻಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!ʼ ಎಂದು ಬರೆದುಕೊಂಡಿದ್ದಾರೆ.
ಶುಭಹಾರೈಕೆ
ʻಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿʼ ಎಂದು ಶುಭಹಾರೈಸಿದರು. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ ʻಶಿವಕುಮಾರʼ ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ತಿಳಿಸಿದ್ದಾರೆ.

