ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ (Pakistan) ಎಂಬ ಹೇಳಿಕೆ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ದೂರು ದಾಖಲಿಸಲಾಗಿದೆ.
ಬೆಂಗಳೂರಿನ (Bengaluru) ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಲಾಗಿದೆ. ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ದೇಶ ವಿರೋಧಿ ಹೇಳಿಕೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಮಗಳ ನಾಮಿನೇಷನ್‌ಗೆ ಯಾರೂ ಬರಬೇಡಿ: ಸತೀಶ್ ಜಾರಕಿಹೊಳಿ
ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Bomb Blast) ಕೇಸ್‌ನಲ್ಲಿ ಎನ್‌ಐಎ ಬಿಜೆಪಿ ಕಾರ್ಯಕರ್ತರೊಬ್ಬರನ್ನು ವಿಚಾರಣೆ ನಡೆಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುವ ವೇಳೆ ಶಾಸಕ ಯತ್ನಾಳ್ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಮಾತನಾಡಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಬರ, ಪ್ರಕೃತಿ ವಿಕೋಪ ಎದುರಿಸಲು ಮುಂಚಿತವಾಗಿಯೇ ಹಣ ನೀಡಲಾಗಿದೆ: ನಿರ್ಮಲಾ ಸೀತಾರಾಮನ್