ಬೆಂಗಳೂರು: ಕಾಶ್ಮೀರದ ಪುಲ್ವಾಮ ದಾಳಿಗೆ (Pulwama Attack) ಬಿಜೆಪಿ (BJP) ಕಾರಣ ಎಂಬ ಗೃಹ ಸಚಿವ ಪರಮೇಶ್ವರ್ (G Parameshwar) ಮತ್ತು ಕೆಲ ಕಾಂಗ್ರೆಸ್ ಶಾಸಕರ ಹೇಳಿಕೆ ವಿಚಾರವಾಗಿ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ದೂರು ಸಲ್ಲಿಕೆ ಮಾಡಿದೆ.
ಸಚಿವ ಪರಮೇಶ್ವರ್ ಮತ್ತು ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರಿಂದ ನೃಪತುಂಗ ರಸ್ತೆಯಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿಯವರಿಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಆ ಜಾತಿ, ಈ ಜಾತಿ ಅಂತ ಅಲ್ಲ. ಜೆರಾಕ್ಸ್ ಮಾಡುವಾಗ, ಐಡಿ ನೀಡುವಾಗ ಬಹಳ ಎಚ್ಚರವಾಗಿರಿ: ಸಾಯಿ ಪ್ರಸಾದ್
Advertisement
Advertisement
ಪುಲ್ವಾಮ ದಾಳಿಗೆ ಬಿಜೆಪಿಯವರೇ ಕಾರಣ ಎಂಬ ಕಾಂಗ್ರೆಸ್ ಶಾಸಕರು ಮತ್ತು ಗೃಹ ಸಚಿವರ ಹೇಳಿಕೆ ಖಂಡನೀಯ. ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿದ್ದು, ಪುಲ್ವಾಮ ದಾಳಿಗೆ ಪಾಕಿಸ್ತಾನವೇ ಕಾರಣ ಎಂಬುದಕ್ಕೆ ಸ್ಪಷ್ಟವಾದ ಆಧಾರಗಳು ಸಿಕ್ಕಿವೆ. ಕರ್ನಾಟಕದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವುದನ್ನು ಟೀಕಿಸದೆ ಅದು ಆ ರೀತಿ ಹೇಳಿರಲಿಲ್ಲ ಎಂಬ ಹೇಳಿಕೆಯನ್ನು ನೋಡಿದ್ದೇವೆ. ಕಾಂಗ್ರೆಸ್‌ಗೆ ಪಾಕಿಸ್ತಾನ ಎನ್ನುವ ದೇಶದ ಬಗ್ಗೆ ಬಹಳ ಪ್ರೀತಿಯೇ? ಇಂತಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಇಂತಹ ಸಚಿವರು ಮತ್ತು ಶಾಸಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ನೀಡಲಾಗಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿ ಬಗೆಗಿನ ಪರಮೇಶ್ವರ್ ಹೇಳಿಕೆ ದೇಶ ವಿರೋಧಿ: ಗೌರವ್ ಭಾಟಿಯಾ
Advertisement