ಬೀದರ್: ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಔರಾದ್ ಶಾಸಕ ಪ್ರಭು ಚವ್ಹಾಣ್, ನೀವು ಕಾಟಾಚಾರಕ್ಕೆ ಸಾಲಮನ್ನಾ ಮಾಡಿದ್ದೀರಿ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಕೆಲ ಕ್ಷಣ ಸಿಎಂ ಮತ್ತು ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು.
ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಿಮ್ಮಿಂದ ಹೇಳಿಸಿಕೊಂಡು ನಾನು ಸಾಲಮನ್ನಾ ಮಾಡಬೇಕಾಗಿಲ್ಲ. ನೀವು ಹೇಗೆ ಮಹಾರಾಷ್ಟ್ರದಲ್ಲಿ ಸಾಲಮನ್ನಾ ಮಾಡಿದ್ದೀರಿ ಎಂಬುವುದು ನನಗೆ ಗೊತ್ತಿದೆ. ಸಾಲಮನ್ನಾ ಕುರಿತು ಕರೆದ ಸಭೆಯಲ್ಲಿ ಭಾಗವಹಿಸಬೇಕು. ವಿಧಾನಸಭೆಯಲ್ಲಿ ನಿಮ್ಮ ಮನವಿಯನ್ನು ಸಲ್ಲಿಸಿ. ಇದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಎಂದು ತಿರುಗೇಟು ನೀಡಿದರು.
Advertisement
Advertisement
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಜೂನ್ ತಿಂಗಳವರೆಗಿನ ರೈತರ ಸಾಲಮನ್ನಾ ಮಾಡಲಾಗುವುದು. ಮಾಜಿ ಸಿದ್ದರಾಮಯ್ಯರ ಘೋಷಣೆ ಮಾಡಿದ್ದ ಸಾಲಮನ್ನಾದ 500 ಕೋಟಿ ರೂ. ಅನುದಾನವನ್ನ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಸಾಲಮನ್ನಾದ ಕುರಿತು ರಾಷ್ಟ್ರೀಯ ಬ್ಯಾಂಕ್ ಗಳ ಜೊತೆ ಈಗಾಗಲೇ ಮಾತನಾಡಿದ್ದೇವೆ. ಸಾಲಮನ್ನಾಕ್ಕಾಗಿ ಬಜೆಟ್ ನಲ್ಲಿ 6500 ಕೋಟಿ ಹಣವನ್ನು ತೆಗೆದಿರಿಸಲಾಗಿದೆ ಎಂದು ತಿಳಿಸಿದರು.
Advertisement
ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದೇನೆ. ಜಿಲ್ಲೆಯ ಅಧಿಕಾರಿಗಳು ಮತ್ತು ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬರ ಪೀಡಿ ತಾಲೂಕಗಳಲ್ಲಿ ಕುಡಿಯುವ ನೀರಿಗಾಗಿ 50 ಲಕ್ಷ ಬಿಡುಗಡೆ ಮಾಡಲಾಗಿದೆ. ದನಕರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ತೆಗೆದುಕೊಂಡಿದೆ. ಶಾಸಕರು ಜಿಲ್ಲೆಯ ಅಭಿವೃದ್ದಿಗೆ ಸಂಬಂಧಿಸಿದಂತೆ ಮನವಿ ನೀಡಿದ್ದಾರೆ. ಬೀದರ್ ಜಿಲ್ಲೆಯನ್ನ ಟೂರಿಸಂ ಗೆ ಹೆಚ್ಚಿನ ಆದ್ಯತೆ ನೀಡೋದರ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೆನೆ ಎಂದು ಸ್ಪಷ್ಟಪಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews