– ಓರ್ವ ಆಸ್ಪತ್ರೆಗೆ ದಾಖಲು
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಿನಲ್ಲಿ ವರುಣಾ (Varuna) ಕ್ಷೇತ್ರ ಪ್ರಬಲ ನಾಯಕರ ಪೈಪೋಟಿಯಿಂದ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾರಾಮಾರಿ ನಡೆದಿದೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಗಲಾಟೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಎಸ್ಎಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಗಲಾಟೆಯಲ್ಲಿ ನಾಗೇಶ್ ಭುಜ ಮತ್ತು ಕಾಲುಗಳಿಗೆ ಗಾಯವಾಗಿತ್ತು. ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮೀನು ಮುಟ್ಟಿದ್ದೇನೆ ದೇಗುಲದ ಒಳಗೆ ಬರಬಹುದೇ?: ಹೊಸ್ತಿಲ ಹೊರಗೆ ನಿಂತು ರಾಹುಲ್ ಪ್ರಶ್ನೆ
ಪಕ್ಷದ ಅಭ್ಯರ್ಥಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ತಿಳಿಸಲಾಗಿದೆ. ಗಾಯಾಳು ನೋಡಲು ಜೆಎಸ್‌ಎಸ್ ಆಸ್ಪತ್ರೆಗೆ ಸೋಮಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.
ಸದ್ಯ ಸಿದ್ದರಾಮಯ್ಯನಹುಂಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ಸಂಬಂಧ ಮೂವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಎನ್‌ಸಿಆರ್ ಮಾಡಿ ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ: ಏ.30ಕ್ಕೆ ಚನ್ನಪಟ್ಟಣಕ್ಕೆ ಮೋದಿ – ದಶಪಥ ಹೆದ್ದಾರಿ ಮಾರ್ಗ ಬದಲಾವಣೆ