ಮೈಸೂರು: ಪಿರಿಯಾಪಟ್ಟಣದ ಜೆಡಿಎಸ್ ಶಾಸಕ ಮಹದೇವ್ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಡಾ.ವೀಣಾ ಸಿಂಗ್‍ರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎತ್ತಂಗಡಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶಾಸಕರ ಆರೋಗ್ಯ ತಪಾಸಣೆಗೆ ತೆರಳದ ವೈದ್ಯೆ ಡಾ.ವೀಣಾ ಸಿಂಗ್ ಮೇಲೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಅವರನ್ನು ಪಿರಿಯಾಪಟ್ಟಣದಿಂದ ಎತ್ತಂಗಡಿ ಮಾಡಲು ಮುಂದಾಗಿದೆ. ಈ ಬಗ್ಗೆ ಸಂವಿಧಾನ ಹಕ್ಕು ಬಾಧ್ಯತೆ ಸಮಿತಿ ಶಿಫಾರಸ್ಸಿನ ಮೇಲೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
Advertisement
Advertisement
ವೈದ್ಯರನ್ನು ಎತ್ತಂಗಡಿ ಮಾಡುವ ಬಗ್ಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಪ್ರಧಾನ ನಿರ್ದೇಶಕ ಡಾ.ರತನ್ ಕೇಲ್ಕರ್ ಅವರ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಲ್ಲದೇ ಸಂವಿಧಾನ ಹಕ್ಕು ಬಾಧ್ಯತೆಯ ಸಮಿತಿ ಸಭೆಯ ಮಾರ್ಗಸೂಚಿ ಪತ್ರವು ಸಹ ಲಭ್ಯವಾಗಿದೆ. ಇದನ್ನೂ ಓದಿ: ಕರೆದಾಕ್ಷಣ `ನೈಟ್ ಡ್ಯೂಟಿ’ಗೆ ಬಾರದ ವೈದ್ಯೆ ವಿರುದ್ಧ ಜೆಡಿಎಸ್ ಶಾಸಕ ದೂರು!
Advertisement
Advertisement
ಏನಿದು ಶಾಸಕರ ಹಾಗೂ ವೈದ್ಯೆಯ ಜಟಾಪಟಿ?
ಶಾಸಕ ಮಹದೇವ್ ಸೆ.18ರ ರಾತ್ರಿ 9 ಗಂಟೆಗೆ ಆಟೋ ಕಳುಹಿಸಿ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯ ಡಾ. ವೀಣಾಸಿಂಗ್‍ರನ್ನು ಮನೆಗೆ ಕರೆದಿದ್ದಾರೆ. ಈ ವೇಳೆ ವೀಣಾ ಅವರು ಐಸಿಯುನಲ್ಲಿ ರೋಗಿಗಳು, ಒಳರೋಗಿಗಳು ಇದ್ದಿದ್ದರಿಂದ ಈಗ ಬರೋಕೆ ಆಗಲ್ಲ ಎಂದಿದ್ದಾರೆ. ಅಲ್ಲದೇ ಸುರಕ್ಷತೆ ದೃಷ್ಟಿಯಿಂದ ತಮ್ಮ ಮನೆಗೆ ಬರೋದಕ್ಕೆ ಸಾಧ್ಯವಿಲ್ಲ ಅಂತ ಹೇಳಿದ್ದರು.
ಇದರಿಂದ ಸಿಟ್ಟಿಗೆದ್ದ ಪಿರಿಯಾಪಟ್ಟಣ ಶಾಸಕ ಮಹದೇವ್, ವೈದ್ಯೆ ವೀಣಾಸಿಂಗ್ ಮೇಲೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಡಾಕ್ಟರ್ ಮೇಲೆ ವಿಧಾನಸಭಾ ಹಕ್ಕುಬಾಧ್ಯತಾ ಸಮಿತಿ ಅಧ್ಯಕ್ಷ ಈಶ್ವರ್ ಖಂಡ್ರೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಡಾ.ವೀಣಾಸಿಂಗ್ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ. ಎಂಎಲ್‍ಎ ದೂರು ಆಧರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಾ. ವೀಣಾಸಿಂಗ್‍ಗೆ ನೋಟಿಸ್ ನೀಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=LsbzC-2HiOA