– 2 ಮದುವೆ ಮಂಟಪ, 3 ಫಾರ್ಮಸಿ ನೆಲಸಮ
ನವದೆಹಲಿ: ಇತ್ತೀಚೆಗಷ್ಟೇ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದಿದ್ದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ರಾಜಧಾನಿ ದೆಹಲಿಯಲ್ಲಿ (New Delhi) ಮತ್ತೊಂದು ಬೃಹತ್ ಬುಲ್ಡೋಜರ್ ಕಾರ್ಯಾಚರಣೆ ನಡೆದಿದೆ.
VIDEO | Delhi: MCD carries out demolition drive against illegal encroachment near Faiz-e-Elahi mosque, Turkman Gate.#DelhiNews #TurkmanGate
(Full video available on PTI Videos – https://t.co/n147TvrpG7) pic.twitter.com/wXSFi4lfA9
— Press Trust of India (@PTI_News) January 7, 2026
ಇದೇ ಜನವರಿ 6 ಮತ್ತು 7ರ ಮಧ್ಯರಾತ್ರಿ (ಬುಧವಾರ ರಾತ್ರಿ) 1 ಗಂಟೆ ಸುಮಾರಿಗೆ ದೆಹಲಿಯ ತುರ್ಕಮನ್ ಗೇಟ್‌ನಲ್ಲಿರುವ ಫೈಜ್-ಎ-ಇಲಾಹಿ ಮಸೀದಿ (Faiz-e-Elahi mosque) ಬಳಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿದೆ. ದೆಹಲಿ ಹೈಕೋರ್ಟ್ (Delhi High Court) ಆದೇಶದಂತೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಅಧಿಕಾರಿಗಳು ಮಸೀದಿ ಮತ್ತು ಸುತ್ತಮುತ್ತಲಿನ ಕಟ್ಟಡಗಳನ್ನ ಧ್ವಂಸಗೊಳಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಬುಲ್ಡೋಜರ್‌ಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಇದನ್ನೂ ಓದಿ: ತಮಿಳುನಾಡಿನ ದೀಪೋತ್ಸವಕ್ಕೆ ಅನುಮತಿ – ಡಿಎಂಕೆ ಸರ್ಕಾರಕ್ಕೆ ಹಿನ್ನಡೆ, ಕೋರ್ಟ್ ತೀರ್ಪಿಗೆ ಭಕ್ತರ ಸಂತಸ
#WATCH | Delhi | Bulldozer action by MCD at an encroachment near Faiz-e-Elahi Masjid, Turkman Gate, continues. https://t.co/4ZxB7q3Vn0 pic.twitter.com/yfPqyBgBCI
— ANI (@ANI) January 7, 2026
ಪಾಲಿಕೆ ಅಧಿಕಾರಿಗಳ ಈ ಕಾರ್ಯಾಚರಣೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ವಿರೋಧಿಸಿದ್ದಾರೆ. ತೆರವು ಕಾರ್ಯಾಚರಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿ ಪ್ರತಿಭಟಿಸಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸ್ ಭದ್ರತೆಯನ್ನ ನಿಯೋಜಿಸಲಾಗಿದೆ. ಇದನ್ನೂ ಓದಿ: ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ
#WATCH | Delhi | Visuals from the area near Faiz-e-Elahi Masjid, Turkman Gate, where MCD, pursuant to the directions of the Delhi High Court, carried out a demolition drive on an encroachment earlier today.
Madhur Verma, Joint Commissioner of Police, Central Range, says, “During… pic.twitter.com/OtauQ2Acgh
— ANI (@ANI) January 7, 2026
ಐವರು ಪೊಲೀಸರಿಗೆ ಗಾಯ
ಇನ್ನೂ ಕಲ್ಲುತೂರಾಟದ ವೇಳೆ ನಡೆದ ಘರ್ಷಣೆಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಡಿಸಿಪಿ ತಿಳಿಸಿದ್ದಾರೆ. ಘಟನೆಗೆ ಕಾರಣರಾದವರನ್ನ ಗುರುತಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಏನೇನು ಧ್ವಂಸ?
ಒತ್ತುವರಿ ತೆರವು ಕಾರುಆಚರಣೆ ವೇಳೆ ಮಸೀದಿ ಬಳಿಯಿದ್ದ ಮದುವೆ ಮಂಟಪ, 2 ಬೃಹತ್ ಮಳಿಗೆಗಳು, ಮೂರು ಫಾರ್ಮಸಿ, ಸೇರಿದಂತೆ ಸುತ್ತಮುತ್ತಲಿನ ಅನೇಕ ಕಟ್ಟಡಗಳನ್ನ ತೆರವುಗೊಳಿಸಲಾಯಿತು. ಇದನ್ನೂ ಓದಿ: ಭಾರತದಲ್ಲಿ ‘ನಕಲಿ ರೇಬೀಸ್ ಲಸಿಕೆ’ ಹಾವಳಿ – ವಿದೇಶಗಳ ಸಲಹೆ ಏನು?

