CrimeLatestMain PostNational

ಅಪ್ರಾಪ್ತೆಗೆ ಮಾದಕ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಿದ ಕಾಮುಕರು

Advertisements

ಲಕ್ನೋ: ಬಾಲಕಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ. ಅಪ್ರಾಪ್ತ ಬಾಲಕಿ ಟ್ಯೂಷನ್ ತರಗತಿಗೆ ಹೋಗಿದ್ದಳು. ಆ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಬಂದು ಆಕೆಗೆ ಮಾದಕ ದ್ರವ್ಯ ನೀಡಿದ್ದಾರೆ. ನಂತರ ಅವಳನ್ನು ಇಬ್ಬರು ವ್ಯಕ್ತಿಗಳು ಸದ್ಪುರ ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅರಣ್ಯದಲ್ಲಿದ್ದ ಮತ್ತಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

RAPE

ಬಾಲಕಿಯು ಸಂಜೆ ಕಳೆದರೂ ಮನೆಗೆ ಬಾರದಿರುವುದರಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಈ ವೇಳೆ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನಂತರ ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಪ್ರಜ್ಞೆ ಬಂದ ನಂತರ ಬಾಲಕಿಯು ಕುಟುಂಬಸ್ಥರಿಗೆ ಈ ವಿಷಯ ತಿಳಿಸಿದ್ದಾಳೆ. ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಪೋಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನ

JAIL

ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸ್ಥಳೀಯ ಜನಸತ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧಿಸಿ ಅಪ್ರಾಪ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಸರಣಿ ಸರಕಳ್ಳತನ – ತಾಯಿ, ಮಗಳು ಬಂಧನ

Leave a Reply

Your email address will not be published.

Back to top button