ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ (Heart Attack) ಬಲಿಯಾದ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್
ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಲ್ಲೆ – ಈಗ ನಿರ್ವಾಹಕನ ಮೇಲೆಯೇ ಪೋಕ್ಸೋ ಕೇಸ್ ದಾಖಲು