CrimeLatestMain PostNational

ಸರ್ಕಾರಿ ಶಾಲೆಯ ಟಾಯ್ಲೆಟ್‍ನಲ್ಲಿ 8ರ ಬಾಲಕಿಯ ಮೇಲೆ ಅತ್ಯಾಚಾರ

Advertisements

ಭೋಪಾಲ್: ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಎಂಟೂವರೆ ವರ್ಷದ ಬಾಲಕಿಯ ಮೇಲೆ ಅಲ್ಲಿನ ಕಾವಲುಗಾರನೊಬ್ಬ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನ ಖೋಫಿಜಾ ಪ್ರದೇಶದಲ್ಲಿ ನಡೆದಿದೆ.

ಲಕ್ಷ್ಮೀನಾರಾಯಣ ಧನಕ್ ಬಂಧಿತ ಆರೋಪಿ. ಈತ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಈತನನ್ನು 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಸಲಾಗಿದೆ.

4ನೇ ತರಗತಿಯನ್ನು ಓದುತ್ತಿದ್ದ ವಿದ್ಯಾರ್ಥಿನಿಯು 6 ದಿನಗಳ ಹಿಂದೆ ಶಾಲೆಗೆ ಪ್ರವೇಶ ಪಡೆದಿದ್ದಳು. ಮಧ್ಯಾಹ್ನ ಊಟದ ಸಮಯದಲ್ಲಿ ಈಕೆ ಶೌಚಾಲಯಕ್ಕೆ ಹೋಗಿದ್ದಳು. ಆ ಸಮಯದಲ್ಲಿ ಅಲ್ಲೇ ಇದ್ದ ಆರೋಪಿ ಲಕ್ಷ್ಮೀನಾರಾಯಣ ಆಕೆಯನ್ನು ಶೌಚಾಲಯದೊಳಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿ: ವೇಶ್ಯಾವಾಟಿಕೆ ಆರೋಪ – ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ

ಘಟನೆ ಬಳಿಕ ಲಕ್ಷ್ಮೀನಾರಾಯಣ ಪರಾರಿಯಾಗಿದ್ದಾನೆ. ಬಾಲಕಿ ಅಳುತ್ತಿರುವುದನ್ನು ಕಂಡು ಇತರ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಹೇಳಿಕೆಯ ಮೇರೆಗೆ ಪೊಲೀಸರು ಲಕ್ಷ್ಮೀನಾರಾಯಣನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಟ್ರಿಪ್‍ಗೆ ಕೈಕೊಟ್ಟ ಪತ್ನಿ- ಪಿಲ್ಲೊ ಜೊತೆ ಹೊರಟ ಪತಿ

Live Tv

Leave a Reply

Your email address will not be published.

Back to top button