ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.
ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.
Advertisement
Advertisement
13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.
Advertisement
ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.
Advertisement
ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.